Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಪಲ್ಲಕ್ಕಿ ಬಸ್ʼ ಎಂದು ಹೆಸರಿಟ್ಟವರಿಗೆ...

ʼಪಲ್ಲಕ್ಕಿ ಬಸ್ʼ ಎಂದು ಹೆಸರಿಟ್ಟವರಿಗೆ ಪ್ರಮಾಣಪತ್ರ ನೀಡಿ ಗೌರವಿಸಬೇಕು: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Oct 2023 1:49 PM IST
share
ʼಪಲ್ಲಕ್ಕಿ ಬಸ್ʼ ಎಂದು ಹೆಸರಿಟ್ಟವರಿಗೆ ಪ್ರಮಾಣಪತ್ರ ನೀಡಿ ಗೌರವಿಸಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು: ʼʼಈ ಹಿಂದೆ ಪಲ್ಲಕ್ಕಿಯನ್ನು ರಾಜ ಮಹಾರಾಜರನ್ನು ಹೊರಲು ಬಳಸಲಾಗುತ್ತಿತ್ತು, ಈಗ ನಮ್ಮ ಮಹಿಳೆಯರು ಹಾಗೂ ಪ್ರಯಾಣಿಕರನ್ನು ಕೆಎಸ್ಸಾರ್ಟಿಸಿಯ ಪಲ್ಲಕ್ಕಿ ಹೊರಲಿದೆ. ಈ ಬಸ್ ಗೆ ಪಲ್ಲಕ್ಕಿ ಎಂದು ಅತ್ಯುತ್ತಮ ಹೆಸರಿಟ್ಟವರಿಗೆ ಪ್ರಮಾಣಪತ್ರ ನೀಡಿ ಗೌರವಿಸಬೇಕುʼʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗ ಇಂದು ರಾಜ್ಯ ಸಾರಿಗೆಯ ಪಲ್ಲಕ್ಕಿ ಕ್ಲಾಸ್ ಬಸ್ ಗಳು ಸೇರಿದಂತೆ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್‌ಗಳಿಗೆ ಮುಖ್ಯಮಂತ್ರಿಗಳೊಂದಿಗೆ ಚಾಲನೆ ನೀಡಿ ಮಾತನಾಡಿದ ಅವರು, ʼʼಇಂದು ಬೆಳಗ್ಗೆ ಈ ಕಾರ್ಯಕ್ರಮಕ್ಕೆ ಬರುವ ಮುನ್ನ ನನ್ನ ಪತ್ನಿಗೂ ಈ ಬಸ್ ವಿಚಾರ ತಿಳಿಸಿ ಮೈಸೂರಿಗೆ ಹೋಗುವಾಗ ಈ ಬಸ್ ನಲ್ಲಿ ಪ್ರಯಾಣ ಮಾಡಿ ನೋಡು ಎಂದು ಹೇಳಿ ಬಂದಿದ್ದೇನೆʼʼ ಎಂದು ತಿಳಿಸಿದರು.

ʼʼಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ನಾವು ಗ್ಯಾರಂಟಿ ಯೋಜನೆ ಘೋಷಿಸಿದಾಗ ಅನೇಕರು ನಮ್ಮನ್ನು ಟೀಕಿಸಿದರು. ಬೇರೆ ರಾಜ್ಯದ ಮುಖ್ಯಮಂತ್ರಿಗಳು, “ನಿಮ್ಮಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ” ಎಂದು ನನ್ನನ್ನು ಕೇಳಿದ್ದರು. ಹೆಣ್ಣು ಕುಟುಂಬದ ಕಣ್ಣು, ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ನೀಡಿ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಲ್ಲಿ ಈವರೆಗೂ ಸುಮಾರು 70.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆʼʼ ಎಂದು ಅವರು ವಿವರಿಸಿದರು.

ʼʼನಾನು ದೆಹಲಿ ಸೇರಿದಂತೆ ಬೇರೆ ರಾಜ್ಯಗಳ ಸಾರಿಗೆ ಸಂಸ್ಥೆಗಳನ್ನು ಭೇಟಿ ಮಾಡಿದಾಗ ಅವರು ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್ ಗಳ ಫೋಟೋಗಳನ್ನೇ ಅವರು ಬಳಸುತ್ತಾರೆ. ನಮ್ಮ ಸಾರಿಗೆ ಸಂಸ್ಥೆಗಳು ದೇಶದಲ್ಲೇ ಅತ್ಯುತ್ತಮ ಸೇವೆ ನೀಡುತ್ತಿರುವ ಸಾರಿಗೆ ಸಂಸ್ಥೆಗಳಾಗಿವೆ. ಹೀಗಾಗಿ ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ಅಭಿನಂದನೆಗಳುʼʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ʼʼರಾಜ್ಯದ ಮಹಿಳೆರು ತಮ್ಮ ಕುಟುಂಬದವರನ್ನು ಬಸ್ ನಲ್ಲಿ ಕರೆದುಕೊಂಡು ಪ್ರಯಾಣ ಮಾಡಲಿ. ಇಂದು 100 ಕೆಎಸ್ಸಾರ್ಟಿಸಿ ಬಸ್ ಹಾಗೂ 40 ಎಸಿ ರಹಿತ ಸ್ಲೀಪರ್ ಬಸ್ ಗಳನ್ನು ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಈ ಪಲ್ಲಕ್ಕಿ ಬಸ್ ನಮ್ಮ ಇತಿಹಾಸ ಪುಟಕ್ಕೆ ಸೇರಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಅವರ ತಂಡಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆʼʼ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X