Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತ್ ಜೋಡೋ ಎಂದವರೇ, ಭಾರತ್ ತೋಡೋ...

ಭಾರತ್ ಜೋಡೋ ಎಂದವರೇ, ಭಾರತ್ ತೋಡೋ ಎನ್ನುತ್ತಿದ್ದಾರೆ : ಸಂಸದ ಡಿ.ಕೆ.ಸುರೇಶ್ ವಿರುದ್ಧ ಎಚ್‍ಡಿಕೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ2 Feb 2024 7:27 PM IST
share
ಭಾರತ್ ಜೋಡೋ ಎಂದವರೇ,  ಭಾರತ್ ತೋಡೋ ಎನ್ನುತ್ತಿದ್ದಾರೆ : ಸಂಸದ ಡಿ.ಕೆ.ಸುರೇಶ್ ವಿರುದ್ಧ ಎಚ್‍ಡಿಕೆ ಆಕ್ರೋಶ

ಬೆಂಗಳೂರು: ‘ಭಾರತ ಒಂದಾಗಿರಬೇಕೆಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ. ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಹೇಳಿಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಎಂದು ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ತಿರುಗೇಟು ನೀಡಿದರು.

ಸಂಘರ್ಷ ಒಳ್ಳೆಯದಲ್ಲ: ಕೇಂದ್ರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಭುದ್ಧತೆಯ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಯಾತ್ರೆ ಮಾಡಿದರು. ಈಗ ವಿಭಜನೆಯ ಮಾತನ್ನು ಆಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಎಂದು ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ? ಇವರು ನ್ಯಾಯ ದೊರಕಿಸಿಕೊಡುತ್ತಾರೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಶೋಷಿತ ವರ್ಗಗಳ ಹೆಸರಿನಲ್ಲಿ ಸಿದ್ದರಾಮಯ್ಯ ಮಜಾ ಮಾಡುತ್ತಿದ್ದಾರೆ. ಆದರೆ, ಶೋಷಿತ ವರ್ಗಗಳ ಜನ ಬೀದಿಯಲ್ಲಿದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ?. ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಏನು ಹೇಳುತ್ತಾರೆ ಇವರು?’ ಎಂದು ಅವರು ಕೇಳಿದರು.

ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಎಂದು ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಎಂದಿದ್ದಾರೆ. ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ ಎಂದು ಅವರು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X