Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಅವಧಿಯಲ್ಲಿ ಕಣ್ಣುಮುಚ್ಚಿದ್ದವರು...

ಬಿಜೆಪಿ ಅವಧಿಯಲ್ಲಿ ಕಣ್ಣುಮುಚ್ಚಿದ್ದವರು ಈಗ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸತ್ಯ ಶೋಧನಾ ಸಮಿತಿಗೆ ಸಿಎಂ ಟೀಕೆ

ವಾರ್ತಾಭಾರತಿವಾರ್ತಾಭಾರತಿ15 Dec 2023 11:43 PM IST
share
ಬಿಜೆಪಿ ಅವಧಿಯಲ್ಲಿ ಕಣ್ಣುಮುಚ್ಚಿದ್ದವರು ಈಗ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಕಣ್ಣು ಮುಚ್ಚಿ ಕೂತಿದ್ದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಳಗಾವಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಕಾಣಿಸಿಕೊಂಡು ಅದರಲ್ಲಿ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ

ಈ ಸಂಬಂಧ ಪತ್ರಿಕಾ ಪ್ರಕಟನೆ ಮೂಲಕ ಹೇಳಿಕೆ ನೀಡಿದ ಅವರು, ʼಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿಯ ಘಟನೆ ಗೊತ್ತಾದ ಕ್ಷಣವೇ ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ.

ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿ ಖಂಡಿತ ಅಲ್ಲಎಂದು ಅವರು ಅರೋಪಿಸಿದರು.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದ 17,813 ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದು ಮಾಹಿತಿ ನೀಡಿದರು.

ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ದ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನ ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ಸವಾಲು ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X