Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೀರ್ಥಹಳ್ಳಿ | ಒಂದೇ ಕುಟುಂಬದ ಸಜೀವ ದಹನ...

ತೀರ್ಥಹಳ್ಳಿ | ಒಂದೇ ಕುಟುಂಬದ ಸಜೀವ ದಹನ ಪ್ರಕರಣ; ಮೂವರ ವಿರುದ್ಧ ಎಫ್​ಐಆರ್​​‌

ವಾರ್ತಾಭಾರತಿವಾರ್ತಾಭಾರತಿ20 Oct 2023 7:55 PM IST
share
ತೀರ್ಥಹಳ್ಳಿ | ಒಂದೇ ಕುಟುಂಬದ ಸಜೀವ ದಹನ ಪ್ರಕರಣ; ಮೂವರ ವಿರುದ್ಧ ಎಫ್​ಐಆರ್​​‌

ಶಿವಮೊಗ್ಗ, ಅ.20: ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು.ಈ ದುರ್ಘಟನೆಯಲ್ಲಿ ರಾಘವೇಂದ್ರ ಕೇಕುಡ, ನಾಗರತ್ನ ಹಾಗೂ ಶ್ರೀರಾಮ್ ಮೃತಪಟ್ಟಿದ್ದರೆ, ಎರಡು ದಿನಗಳ ಬಳಿಕ ಗಂಭೀರ ಗಾಯಗೊಂಡಿದ್ದ ಭರತ್ ಸಹ ಮೃತಪಟ್ಟಿದ್ದರು.

ಭರತ್ ಸಾವಿನ ನಂತರ ಪ್ರಕರಣವನ್ನು ಅಸಹಜ ಸಾವು ವರದಿ (ಯುಡಿಆರ್) ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ನಾಗರತ್ನ ಅವರ ಸಹೋದರನ ಹೇಳಿಕೆಯ ಮೇಲೆ ಎಫ್‌ಐಆರ್ ದಾಖಲಾಗಿದೆ. ಡಾ.ಸುಧೀಂದ್ರ, ಪಾ.ರಾ ಕೃಷ್ಣಮೂರ್ತಿ ಮತ್ತು ರಾಘವೇಂದ್ರ ಅವರ ನಾದನಿ ವಿನೋದರವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಘವೇಂದ್ರ ಕೇಕುಡರಿಗೆ, ಕೃಷ್ಣಮೂರ್ತಿ, ಮಂಜುನಾಥ, ರಾಮಕೃಷ್ಣ ಹಾಗೂ ಡಾ, ಸುಧೀಂದ್ರ ಎಂಬ ನಾಲ್ವರು ಸಹೋದರರಿದ್ದು ಇವರ ಪೈಕಿ ಮಂಜುನಾಥ ಈಗಾಗಲೇ ವಿಧಿವಶರಾಗಿದ್ದಾರೆ.ಮಂಜುನಾಥ್ ಅವರ ಪತ್ನಿ ವಿನೋದ ಇವರಿಗೆ ಜಮೀನುಗಳಿಗೆ ಸಂಬಂಧಿಸಿದಂತೆ ಹಿಸ್ಸೆಯಾಗಿದ್ದು, ರಾಮಕೃಷ್ಣ ಕೇಕುಡ ಇವರು ಹಿಸ್ಸೆ ತೆಗೆದುಕೊಂಡು ಬೇರೆ ವಾಸವಾಗಿದ್ದರು ಎನ್ನಲಾಗಿದೆ.

ಉಳಿದ ಸಹೋದರರಾದ ಡಾ.ಸುಧೀಂದ್ರ, ಮತ್ತು ಪಾರಾ ಕೃಷ್ಣಮೂರ್ತಿ ರಾಘವೇಂದ್ರ ಕೇಕುಡರೊಂದಿಗೆ ಜಮೀನಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಿಪಿಎ ಮಾಡಿಕೊಂಡಿದ್ದರು. ರಾಘವೇಂದ್ರ ಕೇಕುಡ ಜಮೀನಿನ ಅಭಿವೃದ್ಧಿಗಾಗಿ ಸಾಲ ಮಾಡಿದ್ದರು. ಇವರ ಎರಡನೇ ಸಹೋದರ ಮಂಜುನಾಥ್ ಅವರ ಪತ್ನಿ ವಿನೋದರವರಿಗೆ ಜಮೀನಿನ ಬಾಬ್ತಾಗಿ 10 ಲಕ್ಷ ರೂಪಾಯಿಗಳನ್ನು ರಾಘವೇಂದ್ರ ಕೇಕುಡರಿಂದ ಪಡೆದಿದ್ದು, ಪಡೆದ ಹಣದ ಬಗ್ಗೆ ಪತ್ರ ನೊಂದಣಿಯಾಗಿರಲಿಲ್ಲ. ಸುಮಾರು 2 ವರ್ಷಗಳ ಹಿಂದಿನಿಂದಲೂ ಜಮೀನಿನ ಮೇಲೆ ಮಾಡಿದ ಸಾಲದ ವಿಚಾರದಲ್ಲಿ ಡಾ, ಸುದೀಂದ್ರ, ಪಾರಾ ಕೃಷ್ಣ ಮೂರ್ತಿ ಹಾಗೂ ಮಂಜುನಾಥ್ ಪತ್ನಿ ವಿನೋದ ರಾಘವೇಂದ್ರರ ಕುಟುಂಬಕ್ಕೆ ಹಲವಾರು ಬಾರಿ ಬೈದು ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿ ಮಾನಸಿಕ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.

ಅಲ್ಲದೇ, ಸಾಲ ತೀರಿಸದಿದ್ದರೆ ಮನೆ ಖಾಲಿ ಮಾಡುವಂತೆ ಬೆದರಿಸಿ ಮನೆ ಖಾಲಿ ಮಾಡದಿದ್ದರೆ ಶಿವಮೊಗ್ಗದಿಂದ ಗೂಂಡಾಗಳನ್ನು ಕರೆಸಿ ಮನೆಯಿಂದ ಹೊರ ಹಾಕಿಸುವುದಾಗಿ ಹಾಗೂ ಬ್ಯಾಂಕಿನ ಸಾಲವನ್ನು ಕಟ್ಟಬೇಕೆಂದು ಬೆದರಿಸಿದ್ದರು. ಈ ವಿಚಾರದಲ್ಲಿ ರಾಘವೇಂದ್ರ ಕುಟುಂಬ ಅವರುಗಳ ಬೆದರಿಕೆಗೆ ಮನನೊಂದು ಮಾನಸಿಕ ಹಿಂಸೆ ತಡೆಯಲಾಗದೇ ದೇಹ ತ್ಯಾಗವಾಗಿರುತ್ತದೆ ಎಂದು ತೇಜ್ ಪ್ರಕಾಶ್ ದೂರಿನಲ್ಲಿ ದಾಖಲಿಸಿದ್ದಾರೆ.

ಅದ್ದರಿಂದ ರಾಘವೇಂದ್ರ ಕುಟುಂಬ ವರ್ಗದವರ ಸಾವಿಗೆ ಕಾರಣರಾದ ಡಾ, ಸುದೀಂದ್ರ, ಪಾ.ರಾ ಕೃಷ್ಣಮೂರ್ತಿ, ವಿನೋದ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಸುಧೀಂದ್ರ ಶಿವಮೊಗ್ಗದ ಮೆಗ್ಗಾನ್ ನಲ್ಲಿ ವೈದ್ಯರಾಗಿದ್ದಾರೆ. ಪಾರಾ ಕೃಷ್ಣಮೂರ್ತಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X