ನಾಳೆ (ಸೆ.26) ʼಬಂದ್': ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು ನಗರ ಜಿಲ್ಲೆ, ಸೆ, 25: ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು “ಬೆಂಗಳೂರು ಬಂದ್” ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





