ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಹೊಸದಾಗಿ ಸೃಜನೆ ಮಾಡಿರುವ ‘ಪ್ರಜಾಸೇವಾ ಇಲಾಖೆ’ಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥ ಹರ್ಷ ಗುಪ್ತ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ಹರ್ಷ ಗುಪ್ತ ಅವರಿಗೆ ವಹಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ರಾಗಪ್ರಿಯ ಆರ್. ಅವರನ್ನು ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಹಾಗೂ ಡಾ.ಹರೀಶ್ ಕುಮಾರ್ ಕೆ. ಅವರನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಗೋಪಾಲ್ ಕೃಷ್ಣ ಎಚ್.ಎನ್. ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story




