ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಮೇ 6: ರಾಜ್ಯ ಮೀಸಲು ಪೊಲೀಸ್ ಪಡೆಯ ಐಜಿಪಿ ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿ ಉತ್ತರ ವಲಯ ಐಜಿಪಿ, ಬೆಳಗಾವಿ ಉತ್ತರ ವಲಯ ಐಜಿಪಿ ಡಾ.ಚೇತನ್ ಕುಮಾರ್ ರಾಥೋರ್ ಅವರನ್ನು ಸಿಐಡಿ(ಆರ್ಥಿಕ ಅಪರಾಧ) ಐಜಿಪಿಯಾಗಿ ಸರಕಾರ ಬುಧವಾರ ವರ್ಗಾವಣೆ ಮಾಡಿದೆ.
ಅಲ್ಲದೇ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಅನುಪಮ್ ಅಗರ್ವಾಲ್ ಅವರನ್ನು ರಾಜ್ಯ ಮೀಸಲು ಪೊಲೀಸ್ ಪಡೆಯ ಐಜಿಪಿಯಾಗಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
Next Story




