ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಎನ್‍ಆರ್‌ಐ ಇಲಾಖೆ ಕಾರ್ಯದರ್ಶಿಯಾಗಿ ನಕುಲ್ ಎಸ್.ಎಸ್.ಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯ ಕಾರ್ಯದರ್ಶಿ ನಕುಲ್ ಎಸ್.ಎಸ್. ಅವರನ್ನು ಹೊಸದಾಗಿ ರಚನೆ ಮಾಡಲಾಗಿರುವ ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅನಿವಾಸಿ ಭಾರತೀಯ ವ್ಯವಹಾರಗಳ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಎಚ್.ಎಸ್. ಅವರನ್ನು ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
Next Story




