ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಇ-ಆಡಳಿತ ಇಲಾಖೆಯ ಸೆಂಟರ್ ಫಾರ್ ಇ-ಗವರ್ನೆನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ್ ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಇ-ಆಡಳಿತ ಇಲಾಖೆಯ ಸೆಂಟರ್ ಫಾರ್ ಇ-ಗವರ್ನೆನ್ಸ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರಾ ಅವರನ್ನು ಕಲಬುರಗಿಯ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪೆನಿ(ಜೆಸ್ಕಾಂ)ಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story




