Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ ಯತ್ನ...

ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 July 2023 12:44 PM IST
share
ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮದ್ವಾರ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ|| ಬಾಬು ಜಗಜೀವನ್‍ರಾಮ್ ರವರ 37 ನೇ ಪುಣ್ಯತಿಥಿಯ ಅಂಗವಾಗಿ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು, ಜುಲೈ 06: ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂಬ ಕುಮಾರಸ್ವಾಮಿ ಯವರ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮಾಜಿ ಉಪ ಪ್ರಧಾನಮಂತ್ರಿ ಡಾ: ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ವರ್ಗಾವಣೆ ಮಾಡಲೇಬೇಕಾಗಿರುವುದರಿಂದ ಅದನ್ನು ಸರ್ಕಾರ ಮಾಡುತ್ತಿದೆ. ಆ ಕಾರಣಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೇ? ಎಂದು ಪ್ರಶ್ನಿಸಿದರು.

ಹೊಸ ಸರ್ಕಾರ ಬಂದಿದೆ. ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆಯನ್ನು ಮಾಡಬೇಕು. ಮಾರ್ಚ್ , ಏಪ್ರಿಲ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು.

ಮೃತ ಚಾಲಕ ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಸಚಿವರು ರಾಜೀನಾಮೆ ಕೊಡಬೇಕು ಎಂಬ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷ ರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ ಕಾರಣಕ್ಕೆ ಅವರು ವಿಷ ಕುಡಿದಿದ್ದಾರೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ? ಎಂದು ಪ್ರಶ್ನಿಸಿದರು.

ಯತೀಂದ್ರ ಅವರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದರು. ಅವರ ಪತ್ನಿ ಶಾಸಕರು, ಅವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ ಅವರನ್ನು ಏನಂತ ಕರೆಯಬೇಕು ಎಂದು ಕೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X