ಟಿಕೆಟ್ ಇಲ್ಲದೆ ಪ್ರಯಾಣ : 7.32 ಲಕ್ಷ ರೂ.ದಂಡ ವಸೂಲಿ ಮಾಡಿದ ಕೆಎಸ್ಸಾರ್ಟಿಸಿ

ಸಾಂದರ್ಭಿಕ ಚಿತ್ರ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 3,780 ಮಂದಿ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 7,32,495 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,244 ವಾಹನಗಳನ್ನು ತನಿಖೆಗೊಳಪಡಿಸಿ 3,882 ಪ್ರಕರಣಗಳನ್ನು ಪತ್ತೆ ಹಚ್ಚಿ, 3,780 ಟಿಕೆಟ್ ರಹಿತ ಪ್ರಯಾಣಿಕರಿಂದ 7.32ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 97,576ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಎಂದು ತಿಳಿಸಲಾಗಿದೆ.
Next Story