Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ...

ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರಗಳು; 2 ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ವಾರ್ತಾಭಾರತಿವಾರ್ತಾಭಾರತಿ30 Sept 2023 8:02 PM IST
share
ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರಗಳು; 2 ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ಬೆಳ್ತಂಗಡಿ; ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ವಾಹನಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಟ ನಡೆಸಿದ ಘಟನೆ ಶನಿವಾರ ನಡೆದಿದೆ.

ಶನಿವಾರ ಚಾರ್ಮಾಡಿ ಘಾಟಿ ಸೇರಿದಂತೆ ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನದ ಬಳಿಕ ಮಳೆಯೊಂದಿಗೆ ಬೀಸಿದ ಗಾಳಿಗೆ ಘಾಟಿಯ ಎಂಟನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು. ಎಂಟನೇ ತಿರುವಿನ ಮೇಲ್ಭಾಗದ ರಸ್ತೆಯಿಂದ ಏಕಕಾಲದಲ್ಲಿ ಈ ಮೂರು ಮರಗಳು ಕೆಳಭಾಗದ ರಸ್ತೆಗೆ ಉರುಳಿದವು. ಈ ವೇಳೆ ಮರಗಳು ಉರುಳಿದ ರಸ್ತೆ ಭಾಗದಲ್ಲಿ ಯಾವುದೇ ವಾಹನ ಸಂಚಾರ ಇರಲಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಸ್ಥಳದಲ್ಲಿ ಮರಗಳು ಹತ್ತಿರ ಹತ್ತಿರವಿದ್ದು ಒಂದು ಮರ ಉರುಳುವ ವೇಳೆ ಅದು ಸಮೀಪದ ಮರಗಳಿಗೆ ಬಡಿಯುವ ಕಾರಣ ಅವು ಉರುಳಿ ಬೀಳುತ್ತವೆ. ಮರಗಳು ಉರುಳಿದ ಕಾರಣ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರವಾದ ಕಾರಣ ವಾಹನದಟ್ಟಣೆಯು ಅಧಿಕವಿತ್ತು. ವಿಪರೀತ ಮಳೆಯ ಸುರಿಯುತ್ತಿದ್ದು ವಾಹನ ಸವಾರರು,ಪ್ರವಾಸಿಗರು ಪರದಾಟ ನಡೆಸುವಂತಾಯಿತು.

ಮರಗಳು ಉರುಳಿದ ಮಾಹಿತಿ ಪಡೆದ ತಕ್ಷಣ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ಚಾರ್ಮಾಡಿ ಘಾಟಿಯಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಯಾವುದೇ ಅನಾಹುತ ಸಂಭವಿಸಿದರು ಅದರ ಬಗ್ಗೆ ತಕ್ಷಣ ಮಾಹಿತಿ ನೀಡಲು ಸಾಧ್ಯವಾಗುವುದಿಲ್ಲ.ಈ ಕಾರಣದಿಂದ ಇಲ್ಲಿ ಕಾರ್ಯಾಚರಣೆ ತಡವಾಗುತ್ತಿದೆ. ಪ್ರಸ್ತುತ ಭಾರಿ ಮಳೆ ಸುರಿಯುತ್ತಿದ್ದು ಚಾರ್ಮಾಡಿ ಘಾಟಿ ಮೂಲಕ ಸಂಚರಿಸುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನೇತ್ರಾವತಿ, ಮೃತ್ಯುಂಜಯ, ನೆರಿಯ ಹಳ್ಳಗಳು ತುಂಬಿ ಹರಿಯುತ್ತಿದೆ.

ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ನಿರಂತರವಾಗಿಮಳೆ ಸುರಿಯುತ್ತಿದೆ. ಸಂಜೆಯ ವೇಳೆಗೆ ಮಳೆ ಮತ್ತಷ್ಟು ಬಿರುಸಗೊಂಡಿದ್ದು ರಾತ್ರಿಯೂ ಮುಂದುವರಿದಿದೆ. ನದಿಗಳಲ್ಲಿ ನೀರಿನ ಮಟ್ಟ ನಿರಂತರವಾಗಿ ಏರುತ್ತಿರುವುದು ಕಂಡು ಬಂದಿದೆ. ಮಳೆ ರಾತ್ರಿಯೂ ಮುಂದುವರಿದರೆ ನೀರಿನ ಮಟ್ಟ ಅಪಾಯಕಾರಿ ಹಂತಕ್ಕೆ ತಲುಪುವ ಭಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X