Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಗೆ...

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಗೆ ಉಭಯ ಸನದಗಳಲ್ಲಿ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ11 Dec 2023 5:15 PM IST
share
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಗೆ ಉಭಯ ಸನದಗಳಲ್ಲಿ ಶ್ರದ್ಧಾಂಜಲಿ

ಬೆಳಗಾವಿ: ಇತ್ತೀಚೆಗೆ ನಿಧನರಾದ ಹಿರಿಯ ಅಭಿನೇತ್ರಿ, ಬಹುಭಾಷಾ ಕಲಾವಿದೆ ಡಾ.ಲೀಲಾವತಿ ಅವರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸೋಮವಾರ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್ ಯು.ಟಿ.ಖಾದರ್ ಸಂತಾಪ ಸೂಚನೆ ಮಂಡಿಸಿ, ಬಹುಭಾಷಾ ಚಿತ್ರನಟಿ ಡಾ.ಲೀಲಾವತಿಯವರು 1938ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. ಸುಬ್ಬಯ್ಯನಾಯ್ಡು ಅವರ ಸಾಹಿತ್ಯ, ಸಾಮ್ರಾಜ್ಯ ನಾಟಕ ಮಂಡಳಿ ಸೇರಿದ್ದ ಅವರು, ನಾಗಕನ್ನಿಕೆ ಚಲನಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ಕನ್ನಡ, ತುಳು, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳ ಮೂಲಕ 5 ದಶಕಗಳ ಕಾಲ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು.

ವಿಭಿನ್ನ ಪಾತ್ರದಲ್ಲಿ, ಕಪ್ಪು-ಬಿಳುಪು ಕಾಲದಿಂದ ಕಲರ್ ಸ್ಕೋಪ್ ವರೆಗಿನ ಎಲ್ಲ ನಾಯಕ ನಟರೊಂದಿಗೆ ನಟಿಸಿ ಜನಪ್ರಿಯರಾಗಿದ್ದರು. ಕಾಲೇಜು ಹೀರೋ ಚಿತ್ರವನ್ನು ನಿರ್ಮಿಸಿದ್ದರು, ಕನ್ನಡದ ಕಂದ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದರು. ಸಮಾಜ ಸೇವಕಿ ಹಾಗೂ ಪಶು ಪ್ರೇಮಿಯಾಗಿದ್ದ ಅವರು ಕೃಷಿ ಜ್ಞಾನವನ್ನೂ ಹೊಂದಿದ್ದರು. ತಮ್ಮ ಸ್ವಂತ ಹಣದಲ್ಲಿ ಸಾರ್ವಜನಿಕ ಮತ್ತು ಪಶು ಚಿಕಿತ್ಸಾಲಯ ಕಟ್ಟಿಸಿ ಉಚಿತ ಸೇವೆ ಒದಗಿಸಲು ಕಾರಣರಾಗಿದ್ದರು. ರಾಜ್‍ಕುಮಾರ್ ಪ್ರಶಸ್ತಿ, ಅತ್ಯುತ್ತಮ ಪೋಷಕ ನಟಿ, ಫಿಲಂ ಪ್ರಶಸ್ತಿ, ತುಮಕೂರು ವಿವಿ ಗೌರವ ಡಾಕ್ಟರೇಟ್ ಪಡೆದಿದ್ದರು ಎಂದು ಹೇಲಿದರು

ಅಪರೂಪದ ತಾರೆ: ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ನಟಿ ಲೀಲಾವತಿ ಎಲ್ಲ ರೀತಿಯ ಪಾತ್ರಗಳನ್ನೂ ನಿರ್ವಹಿಸಿದ್ದು, ಸಾಮಾಜಿಕ ಬದಲಾವಣೆಗೆ ಕಾರಣಕರ್ತರಾಗಿದ್ದರು. ನಾಯಕಿಯಾಗಿದ್ದ ಅವರು ಪೋಷಕ ನಟಿಯಾಗಿ ಪರಿವರ್ತನೆಗೊಂಡು, ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿದ್ದರು. ಅಪರೂಪದ ತಾರೆಯಾಗಿದ್ದ ಅವರ ಅಗಲುವಿಕೆ ಜಗತ್ತಿಗೆ ತುಂಬಲಾರದ ನಷ್ಟ’ ಎಂದು ಸ್ಮರಿಸಿದರು.

ಪ್ರತಿಮೆ ಸ್ಥಾಪಿಸಿ: ಸಂತಾಪ ಸೂಚನೆ ನಿರ್ಣಯಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಆರ್.ಅಶೋಕ್, ‘ಲೀಲಾವತಿ, ತಮಗೆ ಯಾವುದೇ ಪ್ರಶಸ್ತಿ ಬೇಡ. ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಸರಕಾರದಿಂದ ಅನುಮತಿ ಕೊಡಿಸಿ ಎಂದು ಮನವಿ ಮಾಡಿದ್ದರು. ತಾವು ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಬಳಿಗೆ ಕರೆದುಕೊಂಡು ಹೋಗಿ ಅನುಮತಿ ಕೊಡಿಸಿದ್ದೆ. ಲೀಲಾವತಿಯವರೇ ನಿರ್ಮಿಸಿರುವ ಆಸ್ಪತ್ರೆ ಮುಂದೆ ಮೇರುನಟಿಯ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಆ ಬಳಿಕ ಮೃತರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಪ್ರತಿಮೆ ಸ್ಥಾಪಿಸಲು ಕ್ರಮ: ಆಸ್ಪತ್ರೆ ಹಾಗೂ ಪಶು ಚಿಕಿತ್ಸಾಲಯ ಸ್ಥಾಪಿಸುವ ಮೂಲಕ ಜನರ ಆರೋಗ್ಯ ಹಾಗೂ ಮೂಕಪ್ರಾಣಿಗಳ ಯೋಗಕ್ಷೇಮಕ್ಕೆ ಚಿಂತಿಸಿದ ಅಪರೂಪದ ಕಲಾವಿದೆ ಲೀಲಾವತಿ. ನೆಲಮಂಗಲದಲ್ಲಿ ಲೀಲಾವತಿ ಅವರು ಸ್ಥಾಪಿಸಿರುವ ಆಸ್ಪತ್ರೆ ಆವರಣದಲ್ಲಿ ಲೀಲಾವತಿ ಅವರ ಪ್ರತಿಮೆ ಸ್ಥಾಪಿಸಲು ಸರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

ವಿನೋದ್ ರಾಜ್ ಮಾದರಿ: ‘ವಯಸ್ಸಾದ ಪೋಷಕರು ರಸ್ತೆಗೆ ಎಸೆಯುವಂತಹ ಸ್ಥಿತಿ ನಿರ್ಮಾಣ ಆಗಿರುವ ಈ ಕಾಲದಲ್ಲಿ ತಾಯಿಯನ್ನು ಮಗುವಂತೆ ನೋಡಿಕೊಂಡ ವಿನೋದ್ ರಾಜ್ ಈ ಸಮಾಜಕ್ಕೆ ಮಾದರಿ. ವಿನೋದ್ ರಾಜ್ ಅನಾಥರಲ್ಲ. ಅವರೊಂದಿಗೆ ನಾವೆಲ್ಲಾ, ಈ ಸಮಾಜವೇ ನಿಂತಿದೆ. ಲೀಲಾವತಿ ಎಲ್ಲ ಪಾತ್ರಗಳನ್ನು ಮಾಡುವ ಮೂಲಕ ಹೊಸ ಕಲಾವಿದರಿಗೆ ದೊಡ್ಡ ಗ್ರಂಥವೇ ಆಗಿದ್ದಾರೆ. ಜತೆಗೆ, ತಮ್ಮ ಜೀವನದ ಕೊನೆಯವರೆವಿಗೂ ಭೂ ತಾಯಿಯ ಸೇವೆ ಮಾಡಿದ ಮಣ್ಣಿನ ಮಗಳಾಗಿದ್ದರು’

-ಉಮಾಶ್ರೀ ನಟಿ ವಿಧಾನ ಪರಿಷತ್ತಿನ ಸದಸ್ಯೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X