Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಮಾಯಕ ಹಿಂದೂಗಳನ್ನು ಸರಕಾರದ ವಿರುದ್ದ...

ಅಮಾಯಕ ಹಿಂದೂಗಳನ್ನು ಸರಕಾರದ ವಿರುದ್ದ ಎತ್ತಿಕಟ್ಟುವ ಕ್ಷುಲ್ಲಕ ಪ್ರಯತ್ನ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ದೇವಸ್ಥಾನಗಳ ಹಣ ದುರ್ಬಳಕೆ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ22 Feb 2024 10:13 PM IST
share
ಅಮಾಯಕ ಹಿಂದೂಗಳನ್ನು ಸರಕಾರದ ವಿರುದ್ದ ಎತ್ತಿಕಟ್ಟುವ ಕ್ಷುಲ್ಲಕ ಪ್ರಯತ್ನ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ‘ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ಸರಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ‘ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು, ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎಂದು ಸ್ಪಷ್ಟಣೆ ನೀಡಿದರು.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ಅವರು ವಿವರಣೆ ನೀಡಿದರು.

ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ. ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.

‘ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.

‘ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರುಡುವ ಸಾಮರ್ಥ್ಯ ಹೊಂದಿರಬೇಕೆಂಬ ಅಸ್ವಸ್ಥ ನಿಲುವಿಗೆ ಬಿಜೆಪಿ ಬಂದಿರುವುದು ಗೋಚರಿಸುತ್ತಿದೆ. ಇದೇ ಕಾರಣ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ದುರಂತವೇ ಸರಿ. ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಡಾಲರ್ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X