Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ...

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಸ್ಥಾನಮಾನ; ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಸಭೆ: ಸಚಿವ ತಂಗಡಗಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ28 Jan 2026 2:35 PM IST
share
ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಸ್ಥಾನಮಾನ; ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಸಭೆ: ಸಚಿವ ತಂಗಡಗಿ ಭರವಸೆ

ಬೆಂಗಳೂರು,ಜ.28- ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರವೇ ಸಭೆ ನಡೆಸಲಾಗುವವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರದ ವೇಳೆ ಆಡಳಿತ ಪಕ್ಷದ ಸದಸ್ಯಅಶೋಕ್‍ಕುಮಾರ್ ರೈ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ, ಪರಂಪರೆ, ಲಿಪಿ, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯ, ಸಂಸ್ಕೃತಿ, ಶಾಸನಗಳ ರಚನೆ ಕುರಿತು ಅಧ್ಯನ ನಡೆಸಿ ಡಾ.ಮೋಹನ್ ಆಳ್ವ ಸಮಿತಿ 2023ರ ಫೆ.14ರಂದು ಸರಕಾರಕ್ಕೆ ವರದಿ ಸಲ್ಲಿಸಿದೆ ಎಂದರು.

ಆ ವರದಿಯನ್ನು ಆಧರಿಸಿ ಕಾನೂನು ಇಲಾಖೆ ಅಭಿಪ್ರಾಯ ನೀಡಿದ್ದು, ಹೆಚ್ಚುವರಿ ಅಧಿಕೃತ ಭಾಷೆಗಳ ಘೋಷಣೆಗೆ ರಾಜ್ಯ ಸರಕಾರಗಳಿಗೆ ಅವಕಾಶ ಇದೆ. ಇದನ್ನು ಆಧರಿಸಿ ಆಂಧ್ರಪ್ರದೇಶದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲು ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ನಿಯೋಗವನ್ನು ಕಳುಹಿಸಲಾಗಿತ್ತು. ಸದರಿ ನಿಯೋಗ ವರದಿ ನೀಡಿದ ಬಳಿಕ ಅದರ ಆಧಾರದ ಮೇಲೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಕರಾವಳಿ ಭಾಗದ ಶಾಸಕರ ಜೊತೆ ಸಭೆ ನಡೆಸಲಾಗುವುದು ಎಂದು ಅವರು ಭರಸೆ ನೀಡಿದರು.

ಆರಂಭದಲ್ಲಿ ಮಾತನಾಡಿದ ಸದಸ್ಯ ಅಶೋಕ್ ಕುಮಾರ್ ರೈ, ತುಳು ಭಾಷೆಗೆ 3 ಸಾವಿರ ವರ್ಷಗಳ ಇತಿಹಾಸವಿದೆ. ಲಿಪಿಯೂ ಇದೆ. ಗೂಗಲ್‍ನಲ್ಲಿ ತುಳುವಿನ ಭಾಷಾಂತರಕ್ಕೆ ಅವಕಾಶವಿದೆ. ಜರ್ಮನಿ ಮತ್ತು ಫ್ರಾನ್ಸ್ ನಲ್ಲಿ ತುಳು ಭಾಷೆಯ ಅಧ್ಯಯನವಾಗುತ್ತಿದೆ. ಅದೇ ರೀತಿ ರಾಜ್ಯದಲ್ಲೂ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಮನವಿ ಮಾಡಿದರು.

ಬಿಜೆಪಿ ಸದಸ್ಯ ವೇದವ್ಯಾಸ ಕಾಮತ್ ಮಾತನಾಡಿ, ಅಸ್ಸಾಂ ಮತ್ತು ಪ್ರಶ್ಚಿಮ ಬಂಗಾಳದಲ್ಲಿ ತಲಾ 8 ಭಾಷೆಗಳನ್ನು ಹೆಚ್ಚುವರಿ ಅಧಿಕೃತ ಭಾಷೆಗಳೆಂದು ಪರಿಗಣಿಸಲಾಗಿದೆ. ಆಂಧ್ರದಲ್ಲಿ ಉರ್ದು ಭಾಷೆಯನ್ನು ಅಧಿಕೃತ ಎಂದು ಪರಿಗಣಿಸಲಾಗಿದೆ . ರಾಜ್ಯದಲ್ಲೂ ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಸದಸ್ಯರು ತುಳು ಭಾಷೆಯಲ್ಲೆ ಮಾತನಾಡಿದ್ದು ಅರ್ಥವಾಗದ ಕಾರಣ ನಮ್ಮ ನೆರವಿಗೆ ಬರಬೇಕು ಎಂದು ಸಚಿವ ತಂಗಡಗಿ ಕೋರಿದರು. ಇದಕ್ಕೆ ಸ್ಪಂದಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ತುಳು ನಾಡಿನವರು ಟೀಕೆಯನ್ನಾಗಲಿ, ಹೊಗಳಿಕೆಯನ್ನಾಗಲಿ ಪ್ರೀತಿಯಿಂದ ಮಾಡುತ್ತಾರೆ ಎಂದು ಹೇಳಿ ಸಮಾಧಾನಪಡಿಸಿದರು.

Tags

TuluMinister Thangadgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X