Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತುಂಗಭದ್ರಾ ಜಲಾಶಯದ ನೂತನ 33 ಗೇಟ್‌ಗಳ...

ತುಂಗಭದ್ರಾ ಜಲಾಶಯದ ನೂತನ 33 ಗೇಟ್‌ಗಳ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ25 Jun 2026 3:01 PM IST
share
ತುಂಗಭದ್ರಾ ಜಲಾಶಯದ ನೂತನ 33 ಗೇಟ್‌ಗಳ ಲೋಕಾರ್ಪಣೆ
ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ : ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ: “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ 33 ಸ್ಪಿಲ್ ವೇ ಗೇಟುಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

“ಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ. 19ನೇ ಗೇಟ್ ತುಂಡರಿಸಿದಾಗ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾದ ಶಿವರಾಜ್ ತಂಗಡಗಿ ಹಾಗೂ ಅಧಿಕಾರಿಗಳು ಮಧ್ಯರಾತ್ರಿ ನನಗೆ ಕರೆ ಮಾಡಿ, ಅಣೆಕಟ್ಟು ನಡುಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾನು ಅಂದು ಬೆಳಗ್ಗೆ 8 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದೆವು. ತಕ್ಷಣವೇ ಏನು ಮಾಡಬೇಕು ಎಂದು ತಜ್ಞರೊಂದಿಗೆ ಚರ್ಚಿಸಿ ಒಂದೇ ವಾರದಲ್ಲಿ ಗೇಟ್ ಬದಲಾವಣೆ ಮಾಡಲಾಯಿತು. ಆ ಮೂಲಕ ಈ ಭಾಗದ ರೈತರನ್ನು ರಕ್ಷಣೆ ಮಾಡಲಾಯಿತು” ಎಂದು ತಿಳಿಸಿದರು.

ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ

“ತುಂಗಭದ್ರಾ ಅಣೆಕಟ್ಟು ರಕ್ಷಣೆ ಮಾಡಲಾಗಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಇಂದು ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಚಂದ್ರಬಾಬು ನಾಯ್ಡು, ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಇತಿಹಾಸ ನಿರ್ಮಿಸಿದ್ದೇವೆ. ನಾವು ಇತಿಹಾಸ ಓದುವುದು ಹಾಗೂ ಸ್ಮರಿಸುವುದಕ್ಕಿಂತ ಇತಿಹಾಸ ಸೃಷ್ಟಿಸುವುದು ನಮ್ಮ ಗುರಿ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸೇರಿ ಮೂರು ರಾಜ್ಯಗಳ ರಕ್ಷಣೆ ಮಾಡಿದ್ದೇವೆ” ಎಂದು ತಿಳಿಸಿದರು.

ಒಂದು ತಾಸು ಚರ್ಚಿಸಿ, ಐತಿಹಾಸಿಕ ತೀರ್ಮಾನ

“ಈ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಿಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ. ನಮ್ಮ ನೀರು, ನಮ್ಮ ಹಕ್ಕು ಆಶಯದ ಅಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ನಾವು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇವೆ.

ಅಣೆಕಟ್ಟು ಇತಿಹಾಸ ಸ್ಮರಣೆ

ತುಂಗಭದ್ರಾ ನದಿಗೆ ಜಲಾಶಯ ನಿರ್ಮಿಸುವ ಆಲೋಚನೆಗೆ 1860 ರಲ್ಲೇ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ನಾಂದಿ ಹಾಡಿದ್ದರು. ತದನಂತರ 1949 ರಲ್ಲಿ ಇದರ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುವ ಹೊತ್ತಿಗೆ ಅನೇಕ ಮಹನೀಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ದೇವರು ನಮಗೆ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಿಮ್ಮ ಸೇವೆ ಮಾಡುತ್ತಿದ್ದೇವೆ.

ನಾನು ಸಿಎಂ ಆದ ಬಳಿಕ ಇದು ಎರಡನೇ ಸಾರ್ವಜನಿಕ ಕಾರ್ಯಕ್ರಮ. ರೈತನಿಗೆ ಸಂಬಳವಿಲ್ಲ, ಬಡ್ತಿ ಇಲ್ಲ, ಪಿಂಚಣಿ ಇಲ್ಲ, ರಜೆಯೂ ಇಲ್ಲ ಹಾಗೂ ನಿವೃತ್ತಿಯೂ ಇಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕನ್ನು ಉಳಿಸಬೇಕು ಮತ್ತು ಈ ಭಾಗದ ಭತ್ತದ ಕಣಜವನ್ನು ಕಾಪಾಡಬೇಕು ಎಂಬ ದೃಢ ತೀರ್ಮಾನವನ್ನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾವು ತೆಗೆದುಕೊಂಡಿದ್ದೇವೆ” ಎಂದರು.

ಗೋದಾವರಿ-ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ : ಚಂದ್ರಬಾಬು ನಾಯ್ಡು

"ಕೇಂದ್ರ ಸರಕಾರವು ಈಗಾಗಲೇ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ 'ಕೆನ್-ಬೆತ್ವಾ' ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ 'ಪಾರ್ವತಿ-ಕಾಳಿಸಿಂಧು-ಚಂಬಲ್' ನದಿ ಜೋಡಣೆ ಯೋಜನೆಗಳನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದೆ. ಇದೇ ಮಾದರಿಯಲ್ಲಿ, ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರಕಾರವು 'ರಾಷ್ಟ್ರೀಯ ಯೋಜನೆ'ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಮೂರು ತಲೆಮಾರುಗಳ ಸಮಸ್ಯೆಗೆ ಈ ಗೇಟುಗಳ ಅಳವಡಿಕೆ ಮುಕ್ತಿ ನೀಡಲಿದೆ. : ರೇವಂತ್‌ ರೆಡ್ಡಿ

"ಬಳ್ಳಾರಿ, ಅನಂತಪುರ, ಕರ್ನೂಲ್ ಹಾಗೂ ಪಾಲಮೂರು ಜಿಲ್ಲೆಗಳ ವಲಸೆ ಸಮಸ್ಯೆಗಳು ಮತ್ತು ರೈತರ ಸಂಕಷ್ಟಗಳ ಬಗ್ಗೆ ಸರಕಾರಗಳಿಗೆ ಸಂಪೂರ್ಣ ಅರಿವಿದೆ. ಜಲಾನಯನ ಪ್ರದೇಶದ ಮೂರು ತಲೆಮಾರುಗಳ ಸಮಸ್ಯೆಗೆ ಈ 33 ಗೇಟುಗಳ ನೂತನ ಅಳವಡಿಕೆ ಮತ್ತು ಆಧುನೀಕರಣವು ಮುಕ್ತಿ ನೀಡಲಿದೆ. ಲಕ್ಷಾಂತರ ರೈತರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಇದೊಂದು ದೊಡ್ಡ ಪರಿಹಾರವಾಗಲಿದೆ" ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದರು

Tags

Tungabhadra Dam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X