ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜು.18 ಹಾಗೂ 19ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜು.18 ರಂದು ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಭೀತಿ ಎದುರಾಗಿದ್ದು, ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚನೆ ನೀಡಲಾಗಿದೆ.
Next Story




