Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ...

ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಬೆತ್ತಲಾಗಿದೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ6 Feb 2024 9:27 PM IST
share
ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಬೆತ್ತಲಾಗಿದೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಬೆಂಗಳೂರು: ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ. ಉದ್ದೇಶ ಲೋಕಸಭೆ ಚುನಾವಣೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ʼಎಕ್ಸ್ʼ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೇರಳದ ಸಿಎಂ ಪಿಣರಾಯಿ ವಿಜಯನ್, ‘ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ’ ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು. ‘ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ’ ಎಂದಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೆ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ, ಫೆ.8ರಂದು ದಿಲ್ಲಿಯಲ್ಲಿ ವಿಜಯನ್ ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, ‘ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ’ ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೆ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಎಲ್‍ಡಿಎಫ್ ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ. ಕರ್ನಾಟಕದಲ್ಲಿ ಸಹಕಾರ. ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ರಾಜ್ಯ ಕಾಂಗ್ರೆಸ್‍ಗೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X