Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ...

ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್.ಅಶೋಕ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 Feb 2024 8:04 PM IST
share
ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕೆಎಫ್‍ಡಿ)ಇಬ್ಬರು ಬಲಿಯಾಗಿದ್ದಾರೆ. ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ನವೆಂಬರ್ ತಿಂಗಳಿನಲ್ಲೆ ಮಲೆನಾಡು ಭಾಗದಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆರೋಪಿಸಿದ್ದಾರೆ.

ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ. ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಅವರು ಕಿಡಿಕಾರಿದ್ದಾರೆ.

ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಾಹರಣ ಮಾಡಿದೆ. ಇದರಿಂದಾಗಿಯೆ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪೆನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್ ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಪರಿಹಾರ ಕೊಡಿ: ಮಂಗನ ಕಾಯಿಲೆಗೆ ಬಲಿಯಾಗಿರುವ ಇಬ್ಬರು ಅಮಾಯಕರ ಕುಟುಂಬಗಳಿಗೆ ಸರಕಾರದ ವತಿಯಿಂದ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಹಾಗೂ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರಕ್ಕೆ ಭರಿಸಬೇಕು ಎಂದು ಮುಖ್ಯಮಂತ್ರಿಯನ್ನು ಅಶೋಕ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X