ಉಡುಪಿ ಜಿಲ್ಲಾಸ್ಪತ್ರೆ ಶೀಘ್ರದಲ್ಲೇ ಮೇಲ್ದರ್ಜೆಗೇರಿಸಲಾಗುವುದು : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಆ. 14 : ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಯಶಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಜಿಲ್ಲಾಸ್ಪತ್ರೆ ಕಾಮಗಾರಿಯ ಅಂದಾಜು ವೆಚ್ಚ 115-146 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ. ತಾವು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಹಣದ ಕೊರೆತೆಯಿದ್ದರೆ ಸರಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.
ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗುವುದು. ಅಲ್ಲದೆ, 162 ಹೊಸ ಹುದ್ದೆಗಳನ್ನು ಸೃಜನೆ ಮಾಡುವ ಪ್ರಸ್ತಾವನೆ ಇದೆ. ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಮೇಲೆ ಪೀಠೋಪಕರಣಗಳು, ಸಲಕರಣೆಗಳಿಗೆ ಒದಗಿಸಲು ಟೆಂಡರ್ ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.
Next Story





