Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುಜಿ ಸಿಇಟಿ/ನೀಟ್ | ಸೀಟು ಹಂಚಿಕೆ...

ಯುಜಿ ಸಿಇಟಿ/ನೀಟ್ | ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ1 Aug 2025 8:26 PM IST
share
ಯುಜಿ ಸಿಇಟಿ/ನೀಟ್ | ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು : ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‍ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ಈ ಸಂಬಂಧ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಆ.2ರ ಬೆಳಗ್ಗೆ 11 ಗಂಟೆ ಒಳಗೆ ಇ-ಮೇಲ್ ಮೂಲಕ ಕೆಇಎಗೆ ಸಲ್ಲಿಸಬಹುದು. ಅದರ ನಂತರ ಪರಿಶೀಲಿಸಿ, ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

ಅಂತಿಮ ಫಲಿತಾಂಶ ಪ್ರಕಟಣೆ ನಂತರ ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಕೃಷಿ ಇತ್ಯಾದಿ ಕೋರ್ಸ್‍ಗಳ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ರಾಷ್ಟ್ರಮಟ್ಟದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಹೋಮಿಯೋಪಥಿ ಕೋರ್ಸ್‍ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಇನ್ನೂ ಪ್ರಕಟವಾಗದಿರುವ ಕಾರಣ, ಆ ಕೋರ್ಸ್‍ಗಳ ಪ್ರವೇಶಕ್ಕೆ ಸದ್ಯಕ್ಕೆ ರಾಜ್ಯದಲ್ಲಿಯೂ ಅವಕಾಶ ಇರುವುದಿಲ್ಲ. ಅಲ್ಲಿ ಫಲಿತಾಂಶ ಪ್ರಕಟವಾದ ನಂತರ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಸೀಟು ಹಂಚಿಕೆ ನಂತರ ಅಭ್ಯರ್ಥಿಗಳು ತಮಗೆ ಸಿಕ್ಕಿರುವ ಸೀಟು ಇಷ್ಟ ಇದಿಯೊ/ಇಲ್ಲವೊ ಎಂಬುದನ್ನು ಕಡ್ಡಾಯವಾಗಿ ಛಾಯ್ಸ್ ದಾಖಲಿಸುವುದರ ಮೂಲಕ ತಿಳಿಸಬೇಕು. ಒಂದು ವೇಳೆ ಛಾಯ್ಸ್ ದಾಖಲಿಸದೇ ಇದ್ದಲ್ಲಿ, ಅಂತಹವರನ್ನು ನಂತರದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಪರಿಗಣಿಸುವುದಿಲ್ಲ. ಹಾಗೆಯೇ ಅವರನ್ನು ಇಡೀ ಪ್ರಕ್ರಿಯೆಯಿಂದಲೇ ಹೊರ ಹಾಕಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಛಾಯ್ಸ್ ಏನು? ಎತ್ತ?: ಅಭ್ಯರ್ಥಿಗಳು ತಮಗೆ ಸಿಕ್ಕಿರುವ ಕೋರ್ಸ್/ಕಾಲೇಜು ಇಷ್ಟ ಆಗಿದ್ದು, ಪ್ರವೇಶ ಪಡೆಯುತ್ತೇವೆ ಎನ್ನುವವರು ಛಾಯ್ಸ್-1 ದಾಖಲಿಸಬೇಕು. ಸಿಕ್ಕಿರುವ ಕೋರ್ಸ್/ಕಾಲೇಜು ಸಮರ್ಪಕವಾಗಿದೆ, ಆದರೆ ಇನ್ನೂ ಉತ್ತಮ ಕಾಲೇಜು ಸಿಕ್ಕಿದರೆ ಅಲ್ಲಿ ಪ್ರವೇಶ ಪಡೆಯುತ್ತೇವೆ ಅನ್ನುವವರು ಛಾಯ್ಸ್ -2 ದಾಖಲಿಸಬೇಕು.

ಸಿಕ್ಕಿರುವ ಕಾಲೇಜು/ಕೋರ್ಸ್ ಇಷ್ಟ ಇಲ್ಲ ಅನ್ನುವವರು ಛಾಯ್ಸ್-3 ದಾಖಲಿಸಬೇಕು. ಅಂತಹವರಿಗೆ ಸಿಕ್ಕಿರುವ ಸೀಟು ಹೊರತುಪಡಿಸಿ, ದಾಖಲಿಸಿರುವ ಇತರ ಎಲ್ಲ ಇಚ್ಛೆ/ಆಯ್ಕೆಗಳನ್ನು ಎರಡನೇ ಸುತ್ತಿನಲ್ಲಿ ಪರಿಗಣಿಸಲಾಗುತ್ತದೆ. ನನಗೆ ಯಾವುದೂ ಬೇಡ, ಕೆಇಎ ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರ ಹೋಗುತ್ತೇನೆ ಅನ್ನುವವರು ಛಾಯ್ಸ್-4 ದಾಖಲಿಸಬಹುದು. ಒಟ್ಟಿನಲ್ಲಿ ಯಾವುದೇ ಛಾಯ್ಸ್ ದಾಖಲಿಸುವುದಕ್ಕೂ ಮುನ್ನ ಪೋಷಕರ ಜತೆ ಹತ್ತಾರು ಬಾರಿ ಚರ್ಚೆ ಮಾಡಿಯೇ ಮಾಡಬೇಕು ಎಂದು ಪ್ರಸನ್ನ ಅವರು ಸಲಹೆ ನೀಡಿದ್ದಾರೆ.

ಛಾಯ್ಸ್-1 ಮತ್ತು 2 ದಾಖಲಿಸಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ. ಆದರೆ, ಛಾಯ್ಸ್-3 ಮತ್ತು ಛಾಯ್ಸ್-4 ದಾಖಲಿಸಿದವರು ನಿಗದಿತ ಕೊನೆ ದಿನಾಂಕದೊಳಗೆ ಪುನಃ ವ್ಯವಸ್ಥೆಯೊಳಗೆ ಬಂದು, ಛಾಯ್ಸ್-1 ಅಥವಾ ಛಾಯ್ಸ್-2 ದಾಖಲಿಸುವುದಕ್ಕೂ ಈ ಬಾರಿ ಹೊಸದಾಗಿ ಅವಕಾಶ ನೀಡಲಾಗಿದೆ. ತಮಗೆ ಗೊತ್ತಿಲ್ಲದೆ, ಸೈಬರ್ ಸೆಂಟರ್ ನವರು ಛಾಯ್ಸ್ ಹಾಕಿದ್ದಾರೆಂದು ಅನೇಕ ಪೋಷಕರು ಕಳೆದ ಬಾರಿ ಕೂಡ ಅಳಲು ತೋಡಿಕೊಂಡಿದ್ದರಿಂದ ಈ ಬಾರಿ ಸಣ್ಣ ಬದಲಾವಣೆ ಮಾಡಿದ್ದು, ಎಚ್ಚರಿಕೆಯಿಂದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

ಕಾಲೇಜು ಹಂತದಲ್ಲೇ ವೈದ್ಯಕೀಯ ದಾಖಲೆ ಪರಿಶೀಲನೆ: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಈ ಬಾರಿ ಕೆಇಎಗೆ ಬರುವ ಅಗತ್ಯ ಇರುವುದಿಲ್ಲ. ಬದಲಿಗೆ, ಕಾಲೇಜುಗಳಲ್ಲೇ ಮೂಲ ದಾಖಲೆ ಪರಿಶೀಲನೆ ಮಾಡಿಸಿ, ಅಲ್ಲಿಯೇ ಹಸ್ತಾಂತರಿಬೇಕು ಎಂದು ಪ್ರಸನ್ನ ಅವರು ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X