Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುಜಿಸಿಇಟಿ: ಮೊದಲ ಸುತ್ತಿನ ಫಲಿತಾಂಶ...

ಯುಜಿಸಿಇಟಿ: ಮೊದಲ ಸುತ್ತಿನ ಫಲಿತಾಂಶ ಪ್ರಕಟ, ಜು.24ರ ವರೆಗೆ ಪ್ರವೇಶಕ್ಕೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ15 July 2026 8:42 PM IST
share
ಯುಜಿಸಿಇಟಿ: ಮೊದಲ ಸುತ್ತಿನ ಫಲಿತಾಂಶ ಪ್ರಕಟ, ಜು.24ರ ವರೆಗೆ ಪ್ರವೇಶಕ್ಕೆ ಅವಕಾಶ

ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.

ಈ ಕುರಿತು ಪ್ರಕಟನೆ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ವಿವಿಧ ಕೋರ್ಸ್‍ಗಳ ಒಟ್ಟು 1,41,872 ಸೀಟುಗಳ ಪೈಕಿ 1,22,512 ಸೀಟುಗಳನ್ನು ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿದ್ದು, 19,374 ಸೀಟು ಉಳಿದಿವೆ. ಒಟ್ಟು 91,724 ಎಂಜಿನಿಯರಿಂಗ್ ಸೀಟುಗಳಲ್ಲಿ 90,748 ಸೀಟು ಹಂಚಿಕೆಯಾಗಿದ್ದು, ಕೇವಲ 976 ಸೀಟು ಮಾತ್ರ ಬಾಕಿ ಉಳಿದಿವೆ. ಪಶು ವೈದ್ಯಕೀಯ ಕೋರ್ಸ್‍ನಲ್ಲಿ ಎಲ್ಲ 361 ಸೀಟು ಹಂಚಿಕೆಯಾಗಿವೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಫಾರ್ಮಸಿ ಕೋರ್ಸ್‍ಗಳನ್ನು ಹೊರತುಪಡಿಸಿ ಇತರ ಕೋರ್ಸ್‍ಗಳ ಸೀಟು ಹಂಚಿಕೆ ಮಾಡಲಾಗಿದೆ. ಸೀಟು ಸಿಕ್ಕಿರುವ ಅಭ್ಯರ್ಥಿಗಳಿಗೆ ಚಾಯ್ಸ್ ಗಳ ಆಯ್ಕೆ, ಶುಲ್ಕ ಪಾವತಿ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿದ್ದು, ಜು.24ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಚಾಯ್ಸ್ ದಾಖಲಿಗೂ ಒಂದೊಂದು ಕೋರ್ಸ್‍ಗೆ ಒಂದೊಂದು ದಿನಾಂಕಗಳನ್ನು ನೀಡಿದ್ದು ಆ ಪ್ರಕಾರ ಮಾಡಬೇಕು. ಎಂಜಿನಿಯರಿಂಗ್ ಪ್ರವೇಶ ಬಯಸುವ ಅಭ್ಯರ್ಥಿಗಳು ಜು.16ರಿಂದ, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳು ಜು.17ರಿಂದ ಚಾಯ್ಸ್ ದಾಖಲಿಸಬಹುದು. ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ ಮತ್ತು ಎಎಚ್‍ಎಸ್ ಕೋರ್ಸ್ ಓದುವವರು ಜು.18 ಹಾಗೂ ಬಿಎಸ್‍ಸಿ ನಸಿರ್ಂಗ್ ಅಭ್ಯರ್ಥಿಗಳು ಜು.19ರಿಂದ ಚಾಯ್ಸ್ ದಾಖಲಿಸಬಹುದು ಎಂದು ತಿಳಿಸಿದ್ದಾರೆ.

ಕ್ರೀಡಾ ಇಲಾಖೆಯಿಂದ ಅರ್ಹರ ಪಟ್ಟಿ ಬರುವುದು ತಡ ಆಗಿರುವ ಕಾರಣ ಕ್ರೀಡಾ ಕೋಟಾದ ಸೀಟುಗಳನ್ನು ಮೊದಲ ಸುತ್ತಿನಲ್ಲಿ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಎರಡನೇ ಸುತ್ತಿನಲ್ಲಿ ಆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಉಳಿದಂತೆ ಇತರ ವಿಶೇಷ ಕ್ಯಾಟಗರಿಗಳ ಸೀಟು ಹಂಚಿಕೆ ಮಾಡಿದ್ದು ಉಳಿದ ಸೀಟುಗಳನ್ನು ಅದೇ ಸುತ್ತಿನಲ್ಲಿ ಇತರರಿಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ವೈದ್ಯಕೀಯ ಕೋರ್ಸ್‍ಗಳ ಪ್ರವೇಶದ ನಿರೀಕ್ಷೆಯಲ್ಲಿ ಇರುವವರು ಮೊದಲ ಸುತ್ತಿನಲ್ಲಿ ಬೇರೆ ಯಾವುದೇ ಕೋರ್ಸ್ ಸೀಟು ಹಂಚಿಕೆಯಾಗಿದ್ದರೂ ಅಂತಹವರು ಚಾಯ್ಸ್-2 ಹಾಕಿ ಎರಡನೇ ಸುತ್ತಿನವರೆಗೂ ಕಾಯಬೇಕು. ವೈದ್ಯಕೀಯ ಸೀಟ್ ಮ್ಯಾಟ್ರಿಕ್ಸ್ ಹಾಗೂ ನೀಟ್ ಫಲಿತಾಂಶ ಬಂದ ನಂತರ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ಇಷ್ಟದಂತೆ ಮೊದಲ ಆದ್ಯತೆ ಕೊಟ್ಟು ಆಪ್ಷನ್ಸ್ ದಾಖಲಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿರುವ ಸೀಟು ಇಷ್ಟ ಆಗಿದ್ದರೆ ಅಂತಹವರು ಚಾಯ್ಸ್-1 ಹಾಕಿ, ಶುಲ್ಕ ಪಾವತಿಸಿ, ಸೀಟು ಖಚಿತತೆಯ ಚೀಟಿ ಡೌನ್‍ಲೋಡ್ ಮಾಡಿಕೊಂಡು ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು. ಒಂದು ವೇಳೆ ಸಿಕ್ಕಿರುವ ಸೀಟು ಪರವಾಗಿಲ್ಲ, ಇನ್ನೂ ಉತ್ತಮ ಕಾಲೇಜಿನ ನಿರೀಕ್ಷೆ ಇದ್ದಲ್ಲಿ ಅಂತಹವರು ಜಾಯ್ಸ್-2 ಹಾಕಿ ಕಾಯಬಹುದು. ಸಿಕ್ಕಿರುವ ಸೀಟು ಬೇಡವೇ ಬೇಡ ಅನ್ನುವವರು ಚಾಯ್ಸ್- 3 ಆಯ್ಕೆ ಮಾಡಿಕೊಳ್ಳಬಹುದು. ಸಿಕ್ಕಿರುವ ಸೀಟು ಬೇಡ ಎನ್ನುವ ಹಾಗೂ ಇಡೀ ಪ್ರಕ್ರಿಯೆಯಿಂದ ಹೊರ ನಡೆಯುವುದಾಗಿ ಹೇಳುವವರು ಚಾಯ್ಸ್-4 ಹಾಕಬಹುದು ಎಂದು ತಿಳಿಸಿದ್ದಾರೆ.

ಈ ಹಿಂದೆಲ್ಲ ಸೀಟು ಹಂಚಿಕೆ ನಂತರ ಒಮ್ಮೆ ಯಾವುದಾದರೊಂದು ಚಾಯ್ಸ್ ದಾಖಲಿಸಿದ ನಂತರ ಪುನಃ ಅದನ್ನು ಹಿಂಪಡೆಯುವುದಕ್ಕಾಗಲಿ ಅಥವಾ ಬದಲಿಸುವುದಕ್ಕಾಗಲಿ ಅವಕಾಶವೇ ಇರಲಿಲ್ಲ. ಆದರೆ ಈ ಬಾರಿ ಆ ರೀತಿಯ ನಿರ್ಬಂಧಗಳನ್ನು ತೆಗೆದುಹಾಕಿದ್ದು ನಿಗದಿತ ಅವಧಿಯೊಳಗೆ ಚಾಯ್ಸ್ ಬದಲಾವಣೆಗೂ ಅವಕಾಶ ನೀಡಲಾಗಿದೆ ಪ್ರಸನ್ನ ತಿಳಿಸಿದ್ದಾರೆ.

ಮೊದಲ ಸುತ್ತು: ಹಂಚಿಕೆಯಾದ ಕೋರ್ಸ್‍ವಾರು ಪಟ್ಟಿ

ಕೋರ್ಸ್-ಒಟ್ಟು ಸೀಟು- ಹಂಚಿಕೆಯಾದ ಸೀಟು

ಎಂಜಿನಿಯರಿಂಗ್-91,724 - 90,748

ಕೃಷಿ ವಿಜ್ಞಾನ - 3,915 - 3,897

ನರ್ಸಿಂಗ್‌ - 35,862 - 18,025

ಪಶು ವೈದ್ಯಕೀಯ - 361 - 361

ಎಎಚ್‍ಎಸ್ - 7,457 - 6,962

ಬಿಪಿಟಿ - 2,062 - 2037

ಯೋಗಾ, ನಾಚುರೋಪತಿ - 496 - 482

ಒಟ್ಟು- 1,41,872 - 1,22,512

Tags

UGCET
share
ವಾರ್ತಾಭಾರತಿ
ವಾರ್ತಾಭಾರತಿ
Next Story
X