Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿಯವರ ಜನಪ್ರಿಯತೆ ಸಹಿಸಲಾಗದೆ...

ಮೋದಿಯವರ ಜನಪ್ರಿಯತೆ ಸಹಿಸಲಾಗದೆ ಕಾಂಗ್ರೆಸ್‌ ಚುನಾವಣಾ ಆಯೋಗದ ವಿರುದ್ಧ ಅನುಮಾನ ಹುಟ್ಟುಹಾಕುತ್ತಿದೆ: ವಿಜಯೇಂದ್ರ

‘ಮುಖ್ಯಮಂತ್ರಿಗಳಿಗೆ ರಿಯಲ್‌ ಎಸ್ಟೇಟ್‌ ಹೊರತು ಬೇರೆ ಆದ್ಯತೆಯಿಲ್ಲ’

ವಾರ್ತಾಭಾರತಿವಾರ್ತಾಭಾರತಿ1 Oct 2026 12:41 PM IST
share
ಮೋದಿಯವರ ಜನಪ್ರಿಯತೆ ಸಹಿಸಲಾಗದೆ ಕಾಂಗ್ರೆಸ್‌ ಚುನಾವಣಾ ಆಯೋಗದ ವಿರುದ್ಧ ಅನುಮಾನ ಹುಟ್ಟುಹಾಕುತ್ತಿದೆ: ವಿಜಯೇಂದ್ರ

ಮುಳಬಾಗಿಲು: ಹತಾಶರಾದ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಮೇಲೂ ಅನುಮಾನ ಹುಟ್ಟು ಹಾಕುವ ದುಸ್ಸಾಹಸಕ್ಕೆ ಕೈಹಾಕುತ್ತಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬೂತ್ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಮುಳಬಾಗಿಲು ತಾಲೂಕಿನ ಕುರುಡುಮಲೆ ಶ್ರೀ ವಿಘ್ನೇಶ್ವರ ದೇವಸ್ಥಾನದಲ್ಲಿ ಇಂದು ಪೂಜೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ಸಿನವರ ಕಪಟ ನಾಟಕವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹತಾಶರಾದ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ನರೇಂದ್ರ ಮೋದಿಯವರ ಜನಪ್ರಿಯತೆ, ಯೋಜನೆಗಳು, ದೇಶದ ಮುನ್ನಡೆಸುವಿಕೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂಥ ಭೀಕರ ಬರಗಾಲದ ಸಂದರ್ಭದಲ್ಲಿ ಹೆಕ್ಟೇರಿಗೆ 50 ಸಾವಿರ ಪರಿಹಾರಧನ ಕೊಡಿ ಎಂದು ನಾವು ಕೇಳಿದರೆ, ಅದನ್ನೂ ಕೊಡಲು ಸಾಧ್ಯವಾಗಿಲ್ಲ. ಕೇವಲ 2,500 ರೂ. ಭಿಕ್ಷೆ ಕೊಟ್ಟಂತೆ ಕೊಟ್ಟಿದ್ದಾರೆ ಎಂದು ಟೀಕಿಸಿದರು. ರಾಜ್ಯ ಸರಕಾರವು ರೈತರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ದೂರಿದರು.

ಒನ್‍ವೇನಲ್ಲಿ ವಾಹನ ಹೋದರೆ 5 ಸಾವಿರ ದಂಡ ವಿಧಿಸುವುದಾಗಿ ಸಚಿವರು ಹೇಳಿದ್ದಾರೆ. ಕಾನೂನು ಉಲ್ಲಂಘಿಸುವರ ಮೇಲೆ ಕ್ರಮ ಕೈಗೊಳ್ಳಲಿ. ವಸೂಲಾತಿ, ಜನರ ಮೇಲೆ ಬರೆ ಎಳೆಯುವ ಕೆಲಸಕ್ಕೆ ಕಾಂಗ್ರೆಸ್ ಸರಕಾರ ಹೊರಟಿದೆ. ಸರಕಾರದ ವಿರುದ್ಧ ಜನರೇ ದಂಗೆ ಏಳುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿಗೆ ರಿಯಲ್ ಎಸ್ಟೇಟ್ ಹೊರತುಪಡಿಸಿ ಬೇರೇನೂ ಆದ್ಯತೆ ಇಲ್ಲ. ಕಳೆದ 3 ವರ್ಷದಲ್ಲಿ 55 ಸಾವಿರ ಕೋಟಿ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆ ಬೇರೆ ಕಾರ್ಯಕ್ರಮಕ್ಕೆ ವರ್ಗಾವಣೆ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದರು.

ಈ ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಜನರು ಬುದ್ಧಿ ಕಲಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಜನರು ಆಶೀರ್ವಾದ ಮಾಡಲಿದ್ದಾರೆ. ಕರ್ನಾಟಕವು ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು. ಮುಂದಿನ ದಿನಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಇಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಇಲ್ಲದೇ ಕಾಂಗ್ರೆಸ್ ಸರಕಾರದಲ್ಲಿ ಒಂದು ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲ. ಗೃಹಲಕ್ಷ್ಮಿಯ 5 ಸಾವಿರ ಕೋಟಿ ಎಲ್ಲಿ ಹೋಗಿದೆ ಎಂಬುದಕ್ಕೆ ಇವತ್ತಿಗೂ ಉತ್ತರ ಸಿಕ್ಕಿಲ್ಲ. ಇದು ಭ್ರಷ್ಟರಿಂದ- ಭ್ರಷ್ಟರ ರಕ್ಷಣೆಗೆ ಇರುವ ಸರಕಾರ ಎಂದು ಟೀಕಿಸಿದ ಅವರು, ಈ ಭ್ರಷ್ಟರ ಸರಕಾರವನ್ನು ಬುಡಸಮೇತ ಕಿತ್ತುಹಾಕುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸುದೀರ್ಘ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಮೋದಿಜೀ ಅವರಿಗೆ ಭಗವಂತನು ಆರೋಗ್ಯ ಮತ್ತು ಆಯುಸ್ಸನ್ನು ಕೊಟ್ಟು ದೇಶ ಮುನ್ನಡೆಸುವ ಹೆಚ್ಚಿನ ಶಕ್ತಿ ಕೊಡಲೆಂದು ಪ್ರಾರ್ಥಿಸಿ ಪ್ರವಾಸ ಆರಂಭಿಸಿದ್ದೇವೆ. ಬಂಗಾರಪೇಟೆ ಮತ್ತು ಕೆಜಿಎಫ್ ವಿಧಾನಸಭಾ ಕ್ಷೇತ್ರಗಳಲ್ಲಿ ಸೇವಾ ಸಂಕಲ್ಪ ಅಭಿಯಾನ ಮುಂದುವರಿಯಲಿದೆ ಎಂದರು.

ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಬರಲಿವೆ. ಅದು ಕಾರ್ಯಕರ್ತರ ಚುನಾವಣೆಯಾಗಿದ್ದು, ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವೂ ಯಾತ್ರೆ ವೇಳೆ ನಡೆಯಲಿದೆ. ಭವಿಷ್ಯದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಅಧಿಕಾರಕ್ಕೆ ಬರಲು ಕೋಲಾರ ಜಿಲ್ಲೆಯಲ್ಲೂ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ನಾವು ಗೆಲ್ಲಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಎನ್.ಎಸ್. ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಅಂಬಿಕಾ ಹುಲಿನಾಯ್ಕರ್, ಜಿಲ್ಲಾಧ್ಯಕ್ಷ ಓಂ ಶಕ್ತಿ ಛಲಪತಿ, ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ವೈ. ಸಂಪಂಗಿ, ವರ್ತೂರ್ ಪ್ರಕಾಶ್, ಬಿ.ಪಿ. ವೆಂಕಟಮುನಿಯಪ್ಪ, ಕೆ.ಎಸ್. ಮಂಜುನಾಥ ಗೌಡ, ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ವಿಭಾಗ ಪ್ರಭಾರಿ ಬ್ಯಾಟರಂಗೇಗೌಡ, ವಿಭಾಗ ಸಹ-ಪ್ರಭಾರಿ ಎಂ.ಕೆ. ವಾಸುದೇವ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

ModiCongressElection CommissionVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X