Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ...

ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ʼಕರ್ನಾಟಕ ಪರ್ವʼದ ಆಶಯ: ಸಿಎಂ ಡಿ ಕೆ ಶಿವಕುಮಾರ್

►ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ ►ಅಲ್ಪಸಂಖ್ಯಾತರು ಎಸ್ಐಆರ್ ಬಗ್ಗೆ ಎಚ್ಚರದಿಂದಿರಿ

ವಾರ್ತಾಭಾರತಿವಾರ್ತಾಭಾರತಿ26 Sept 2026 2:33 PM IST
share
ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ʼಕರ್ನಾಟಕ ಪರ್ವʼದ ಆಶಯ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆ.26: “ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ. ಇದು ನಮ್ಮ ಸರ್ಕಾರದ ಪ್ರತಿಬಿಂಬ, ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ, ಕುಶಲಕರ್ಮಿಗಳ ಬದುಕು ಬೆಳಗಲಿ ಎಂದು ಈ ಕಾರ್ಯಕ್ರಮ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕರ್ನಾಟಕ ಪರ್ವ 2026 ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

“ಇಂದು 180ಕ್ಕೂ ಹೆಚ್ಚು ಮಳಿಗೆಗಳನ್ನು ಆರಂಭಿಸಲಾಗಿದೆ. ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಕರ್ನಾಟಕ ಸಾಂಸ್ಕೃತಿಕ ವೈವಿಧ್ಯತೆಗೆ ವೇದಿಕೆಯಾಗಿದೆ. ಕುಶಲಕರ್ಮಿಗಳ ಕೈಚಳಕ ಮಾರುಕಟ್ಟೆ, ಉದ್ಯಮಗಳಿಗೆ ಮಾರುಕಟ್ಟೆ ಅವಕಾಶ ಕಲ್ಪಿಸುತ್ತಿದ್ದೇವೆ. ಪಾರಂಪರಿಕ ಕಲೆ ಉಳಿಸಲು ಪ್ರೋತ್ಸಾಹ ನೀಡಲು ನಾವು ಸೇರಿದ್ದೇವೆ. ನಮ್ಮ ರಾಜ್ಯದಲ್ಲಿ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ಆಹಾರ ಪದ್ಧತಿ ಇದೆ. ಈ ವೈವಿಧ್ಯತೆ ನಮ್ಮ ದೇಶದ ಶಕ್ತಿ. ಈ ದೇಶದ ಆಸ್ತಿ ನಮ್ಮ ಸಂಸ್ಕೃತಿ. ಇದನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮ್ಮ ಸರ್ಕಾರ, ಜನತೆಯ ಸರ್ಕಾರ” ಎಂದು ತಿಳಿಸಿದರು.

“ಅಲ್ಪಸಂಖ್ಯಾತರ ಸ್ವಾವಲಂಬೀಕರಣ, ಕರ್ನಾಟಕದ ಸಮಗ್ರ ಅಭಿವೃದ್ಧಿಯ ಭಾಗ. ಅಲ್ಪಸಂಖ್ಯಾತರ ಎಲ್ಲಾ ಸಮುದಾಯಗಳು ಒಟ್ಟಾಗಿ ಸೇರಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ಇತಿಹಾಸ. ಇದೇ ಉದ್ದೇಶದ ಮೇಲೆ ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದೆ. ನಾಡಿನ ಎಲ್ಲಾ ಜನರ ಬದುಕಿಗೆ ಕೊಟ್ಟ ದೊಡ್ಡ ಅವಕಾಶ ಕರ್ನಾಟಕ ಪರ್ವ. ನಾನು ಅಧಿಕಾರ ವಹಿಸಿಕೊಂಡು 115 ದಿನಗಳಾಗಿವೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯಕ್ರಮ ರೂಪಿಸಲಾಗಿದ್ದು, ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ” ಎಂದರು.

ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ

“ಇಂದು ಅಲ್ಪಸಂಖ್ಯಾತ ಸಮುದಾಯದ ಮೂವರನ್ನು ಸಚಿವರನ್ನಾಗಿ, ಒಬ್ಬರನ್ನು ಪರಿಷತ್ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. 25 ಕ್ಕೂ ಹೆಚ್ಚು ಮಂದಿಗೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದೆ. ಕಲಬುರ್ಗಿ ದರ್ಗಾದ ಪ್ರಮುಖ ನಾಯಕರಿಗೆ ವಕ್ಫ್ ಮಂಡಳಿ ಜವಾಬ್ದಾರಿ ನೀಡಲಾಗಿದೆ. ಆಮೂಲಕ ರಾಜ್ಯದ ಬೇರೆ ಭಾಗದ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

ಅಲ್ಪಸಂಖ್ಯಾತರು ಎಸ್ಐಆರ್ ಬಗ್ಗೆ ಎಚ್ಚರದಿಂದಿರಿ

“ಈ ಬಾರಿಯ ಮೈಸೂರು ದಸರಾ ಹಬ್ಬಕ್ಕೆ ಬೈಲುಕುಪ್ಪೆಯ ಬೌದ್ಧಧರ್ಮದವರಿಗೆ ಹಾಗೂ ರಾಜ್ಯದ ಎಲ್ಲಾ ಸಮುದಾಯದವರಿಗೆ ಆಹ್ವಾನ ನೀಡಿದ್ದೇನೆ. ನಮ್ಮ ಸರ್ಕಾರ ಅಲ್ಪಸಂಖ್ಯಾತರಿಗೆ ಅದರಲ್ಲೂ ಯುವಕರ ವಿದ್ಯಾಭ್ಯಾಸಕ್ಕೆ ಹಾಗೂ ಕೌಶಲ್ಯಕ್ಕೆ ಉತ್ತೇಜನ ನೀಡಲು ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ. ನೀವು ಬೇರೆ ಕಡೆ ಉದ್ಯೋಗ ಹುಡುಕುವುದರ ಜತೆಗೆ ನೀವೇ ಹತ್ತಾರು ಜನರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸಿದ್ದೇವೆ" ಎಂದರು.

"ಯುವ ಜನಾಂಗ ಜಾಗೃತರಾಗಿರಬೇಕು. ಎಸ್ಐಆರ್ ಪ್ರಕ್ರಿಯೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲು ಸಂಚು ನಡೆಯುತ್ತಿದ್ದು, ನಾವು ಇದರ ವಿರುದ್ಧ ಹೋರಾಟ ಮಾಡುತ್ತಿದಿದ್ದೇವೆ. ನೀವು ನಿಮ್ಮ ಮತದಾನದ ಹಕ್ಕು ರಕ್ಷಿಸಿಕೊಳ್ಳಿ. ಮತದಾನದ ಹಕ್ಕು ಬದುಕಿನ ಹಕ್ಕಾಗಿದೆ. ಇದನ್ನು ಉಳಿಸಿಕೊಳ್ಳಿ ಎಂದು ಮನವಿ ಮಾಡುವೆ” ಎಂದರು.

ಮಹಿಳೆಯರು ಸ್ವಾವಲಂಬಿಗಳಾಗಿ, ಉದ್ಯಮಿಗಳಾಗಿ ಉದ್ಯೋಗ ಸೃಷ್ಟಿಸಿ

“ಮಹಿಳೆಯರು ಸ್ವಾವಲಂಬಿಗಳಾಗಿ, ಉದ್ಯಮಿಗಳಾಗಿ ಉದ್ಯೋಗ ಸೃಷ್ಟಿಸಬೇಕು. ಅದಕ್ಕಾಗಿ ನಿಮ್ಮ ಬದುಕಿನಲ್ಲಿ ಶಕ್ತಿ ತುಂಬಲು ಬದ್ಧವಾಗಿದೆ. ಮಹಿಳೆಯರ ಬದುಕಿನಲ್ಲಿ ಶಕ್ತಿ ನೀಡಲು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಸಮಾಜದ ಎಲ್ಲಾ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಲು ನಮ್ಮ ಸರ್ಕಾರ ಪ್ರತಿ ವರ್ಷ 1.20 ಲಕ್ಷ ಕೋಟಿ ಹಣ ವಿನಿಯೋಗಿಸುತ್ತಿದೆ” ಎಂದು ಹೇಳಿದರು.

Tags

Unity in diversity'Karnataka Parva'CM D.K. Shivakumar.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X