Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಗಸ್ಟ್ ವೇಳೆಗೆ ಬೆಂಗಳೂರಿನಲ್ಲಿ...

ಆಗಸ್ಟ್ ವೇಳೆಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ | ಎಂ.ಬಿ.ಪಾಟೀಲ್‌ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

ವಾರ್ತಾಭಾರತಿವಾರ್ತಾಭಾರತಿ12 Jan 2026 10:07 PM IST
share
ಆಗಸ್ಟ್ ವೇಳೆಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ | ಎಂ.ಬಿ.ಪಾಟೀಲ್‌ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ
‘ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ಕ್ಯಾಂಪಸ್ : 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ’

ಬೆಂಗಳೂರು : ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವ ವಿದ್ಯಾನಿಲಯಗಳಲ್ಲಿ ಒಂದಾಗಿರುವ ‘ನ್ಯೂಸೌತ್ ವೇಲ್ಸ್ ವಿವಿ’ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮ್ಮುಖದಲ್ಲಿ ಸಹಿ ಮಾಡಲಾಯಿತು.

ಸೋಮವಾರ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಈ ವಿಶ್ವ ವಿದ್ಯಾನಿಲಯವು ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ ಎಂದು ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸುಧಾಕರ್ ತಿಳಿಸಿದ್ದಾರೆ.

ನಿಯೋಗದೊಂದಿಗೆ ವಿಚಾರ ವಿನಿಮಯ ನಡೆಸಿದ ನಂತರ ಮಾತನಾಡಿದ ಪಾಟೀಲ್, ನ್ಯೂಸೌತ್ ವೇಲ್ಸ್ ವಿ.ವಿ.ದ ಶೈಕ್ಷಣಿಕ ಮಂಡಳಿಯೇ ಬೆಂಗಳೂರು ಕ್ಯಾಂಪಸ್ಸಿನಲ್ಲಿ ಓದುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ಅಲ್ಲಿ ತಾನು ಹೊಂದಿರುವ ಪಠ್ಯಕ್ರಮವನ್ನೇ ಇಲ್ಲೂ ಬೋಧಿಸಲಿದೆ. ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ಹಲವು ಅಗ್ರಮಾನ್ಯ ಕಂಪೆನಿಗಳೂ ಇರುವುದರಿಂದ ವಿದ್ಯಾರ್ಥಿಗಳ ಕಲಿಕೆ, ಕೌಶಲ್ಯಾಭ್ಯಾಸಕ್ಕೆ ನೆರವು ಸುಗಮವಾಗಿ ಸಿಗಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್‍ಸಿಟಿಯಲ್ಲಿ ಇವರ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ. ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಅವರು ವಿವರಿಸಿದರು.

ಸಚಿವ ಸುಧಾಕರ್ ಮಾತನಾಡಿ, ನ್ಯೂಸೌತ್ ವೇಲ್ಸ್ ವಿಶ್ವ ವಿದ್ಯಾನಿಲಯವು ಏಷ್ಯಾ-ಪೆಸಿಫಿಕ್ ವಲಯದಲ್ಲೇ ಅತ್ಯುತ್ತಮ ಉದ್ಯೋಗಾವಕಾಶನ್ನು ಸೃಷ್ಟಿಸುತ್ತಿರುವ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಲ್ಲಿಂದ ಪದವಿ/ ಸ್ನಾತಕೋತ್ತರ ಪದವಿ ಪಡೆದು ಹೊರಬರುವವರನ್ನು ಉದ್ಯೋಗದಾತರು ತಮ್ಮ ಕಂಪನಿಗಳಿಗೆ ಅರಸುತ್ತಿರುತ್ತಾರೆ. ಇಂತಹ ವಿ.ವಿ.ಯು ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯುತ್ತಿರುವುದರಿಂದ ಇಲ್ಲಿನ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಜೊತೆಗೆ ಇಂತಹ ಇನ್ನಷ್ಟು ವಿದೇಶಿ ವಿ.ವಿ.ಗಳು ನಮ್ಮಲ್ಲಿಗೆ ಬರಲು ಉತ್ತೇಜನ ನೀಡಲಿದೆ ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಇನ್ವೆಸ್ಟ್ ಕರ್ನಾಟಕ ಫೋರಂ ಸಿಇಒ ಜ್ಯೋತ್ಸ್ನಾ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು.

Tags

UniversityAustraliaBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X