Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿಯಲ್ಲಿ ಅಸ್ಪೃಶ್ಯತೆ ಆಚರಣೆ |...

ಕಲಬುರಗಿಯಲ್ಲಿ ಅಸ್ಪೃಶ್ಯತೆ ಆಚರಣೆ | ದಲಿತ ವಿದ್ಯಾರ್ಥಿಗಳ ಕ್ಷೌರ ಮಾಡಲು ನಿರಾಕರಣೆ ಆರೋಪ; ಕ್ಷೌರಿಕನ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Jun 2025 11:51 PM IST
share
ಕಲಬುರಗಿಯಲ್ಲಿ ಅಸ್ಪೃಶ್ಯತೆ ಆಚರಣೆ | ದಲಿತ ವಿದ್ಯಾರ್ಥಿಗಳ ಕ್ಷೌರ ಮಾಡಲು ನಿರಾಕರಣೆ ಆರೋಪ; ಕ್ಷೌರಿಕನ ವಿರುದ್ಧ ಪ್ರಕರಣ ದಾಖಲು

ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತ ಸಮುದಾಯದ ಶಾಲಾ ಮಕ್ಕಳಿಗೆ ಕ್ಷೌರ ಮಾಡಲು ನಿರಾಕರಿಸಿದ ಅಮಾನವೀಯ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.

ಜೂ.27ರಂದು ಕಿಣ್ಣಿ ಸುಲ್ತಾನ್ ಗ್ರಾಮದ ಶಾಲಾ ಮಕ್ಕಳು ಕ್ಷೌರ ಮಾಡಿಸಲು ಗ್ರಾಮದ ಕ್ಷೌರ ಅಂಗಡಿಗೆ ಹೋಗಿದ್ದಾರೆ. ಈ ವೇಳೆ ಕ್ಷೌರಿಕ ‘ದಲಿತ ಮಕ್ಕಳಿಗೆ ಕ್ಷೌರ ಮಾಡುವುದಿಲ್ಲ. ನೀವು ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ’ ಎಂದು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಕ್ಷೌರಿಕನೊಂದಿಗೆ ದಲಿತ ಮುಖಂಡರೊಬ್ಬರು ಮಾತನಾಡಿ, ಶಿಕ್ಷಕರು ಕ್ಷೌರ ಮಾಡಿಕೊಂಡು ಬರಬೇಕು ಎಂದು ಹೇಳಿದ್ದಾರೆ, ಹಾಗಾಗಿ ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಮಕ್ಕಳಿಗೆ ಯಾಕೆ ಕ್ಷೌರ ಮಾಡಿಲ್ಲ’ ಎಂದು ಪ್ರಶ್ನಿಸಿದಾಗ, ‘ನಮ್ಮ ಹಿರಿಯರು ಹೊಲೆಯ ಮಾದಿಗರಿಗೆ ಕ್ಷೌರ ಮಾಡಿಲ್ಲ, ನಾವು ಕೂಡ ನಿಮಗೆ ಕ್ಷೌರ ಮಾಡುವುದಿಲ್ಲ’ ಎಂದು ಕ್ಷೌರಿಕ ಹೇಳಿದ್ದಾನೆ ಎಂದು ದೂರಿದರು.

‘ಕ್ಷೌರ ಮಾಡಿಸಲು ಆಳಂದ ಪಟ್ಟಣಕ್ಕೆ ಹೋಗುತ್ತೇವೆ’ :

ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕ್ಷೌರ ಮಾಡಲು ಹಿಂದೇಟು ಹಾಕಿದ್ದಾರೆ. ಹಾಗಾಗಿ ಸಮುದಾಯದ ಜನರು 10 ಕಿಮೀ ದೂರದ ಆಳಂದ ಪಟ್ಟಣ, ಸಮೀಪದ ತಡಕಲ್ ಗ್ರಾಮಗಳಿಗೆ ತೆರಳಿ ಕ್ಷೌರ ಮಾಡಿಕೊಂಡು ಬರುತ್ತಿದ್ದೇವೆ. ಗ್ರಾಮದಲ್ಲಿ ಮೇಲ್ಜಾತಿಯವರ ಪ್ರಭಾವದಿಂದ ನಮಗೆ ಕ್ಷೌರ ಮಾಡಲು ನಿರಾಕರಣೆ ಮಾಡುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ತಾಲೂಕು ಮತ್ತು ಜಿಲ್ಲೆಯ ಅಧಿಕಾರಿಗಳು ನಮ್ಮ ಗ್ರಾಮದ ಅಸ್ಪೃಶ್ಯತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ್ ಶೃಂಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ 125 ದಲಿತ ಸಮುದಾಯದ ಮನೆಗಳಿದ್ದು, ಅನೇಕ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ, ಈವರೆಗೆ ಜಾತಿ ನೋಡಿಕೊಂಡು ನಮ್ಮ ಮಕ್ಕಳಿಗೆ ಗ್ರಾಮದಲ್ಲಿರುವ 3 ಸಲೂನ್‌ನವರೂ ಕಟಿಂಗ್ ಮಾಡಲು ನಿರಾಕರಿಸುತ್ತಿದ್ದಾರೆ ಎಂದು ಗ್ರಾಮಸ್ಥೆ ಚಂದ್ರಕಲಾ ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಸೂಚನೆಯಿಂದ ಕ್ಷೌರ ಮಾಡಿದ ಕ್ಷೌರಿಕ:

ಘಟನಾ ಸ್ಥಳಕ್ಕೆ ಶುಕ್ರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ದಲಿತ ಸಮುದಾಯದವರಿಗೆ ಕಟಿಂಗ್ ಮಾಡಲು ತಿಳಿಸಿದ್ದರು. ಅವರ ಸೂಚನೆಯನ್ನೂ ಧಿಕ್ಕರಿಸಿದ ಕ್ಷೌರಿಕ ಕ್ಷೌರ ಮಾಡಲು ನಿರಾಕರಿಸಿದ್ದ. ಈ ರೀತಿ ವರ್ತಿಸಿದರೆ ಪ್ರಕರಣ ದಾಖಲಿಸಬೇಕಾಗುತ್ತೆ ಎಂದು ಪೊಲೀಸರು ಹೇಳಿದ ಮೇಲೆ ಕ್ಷೌರಿಕ ಕ್ಷೌರ ಮಾಡಲು ಒಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ಹೋಳ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆಳಂದ ಶಾಸಕ ಬಿ.ಆರ್.ಪಾಟೀಲ್ ಈ ಬಗ್ಗೆ ಪ್ರತಿಕ್ರಿಯಿಸಬೇಕಿತ್ತು. ಸಮಾಜವಾದಿ ಎಂದು ಹೇಳಿಕೊಳ್ಳುವ ಶಾಸಕರು, ದಲಿತರ, ಅಲ್ಪಸಂಖ್ಯಾತರ ಮತ ಪಡೆದಿರುವ ಅವರು, ಅಸ್ಪೃಶ್ಯತೆ ಆಚರಣೆ ಬಗ್ಗೆ ತುಟಿ ಬಿಚ್ಚಿಲ್ಲ. ನಮ್ಮ ವಠಾರದಲ್ಲೇ ಪ್ರತ್ಯೇಕ ಕ್ಷೌರ ಅಂಗಡಿ ಸ್ಥಾಪಿಸಬೇಕಾದ ಅನಿವಾರ್ಯ ಬಂದೊದಗಿದೆ.

-ಹಣಮಂತ ಜಿ. ಯಳಸಂಗಿ, ದಲಿತ ಸೇನೆ ರಾಜ್ಯಾಧ್ಯಕ್ಷ

ಅಸ್ಪೃಶ್ಯತೆ ಆಚರಣೆ ಗಮನಕ್ಕೆ ಬಂದ ಕೂಡಲೇ ಆ ಗ್ರಾಮಕ್ಕೆ ತೆರಳಿ ಸಮಸ್ಯೆ ಬಗೆಹರಿಸಿದ್ದೇವೆ. ಈ ಕುರಿತು ಗ್ರಾಮಸ್ಥರೊಬ್ಬರು ನೀಡಿದ ದೂರಿನ ಮೇರೆಗೆ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

-ಶರಣಬಸಪ್ಪ ಕೊಡ್ಲಾ, ಪಿ.ಐ, ಆಳಂದ ಪೊಲೀಸ್ ಠಾಣೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X