Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ;...

ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Jan 2025 2:15 PM IST
share
ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ, ಜ.18: "ಸುವರ್ಣಸೌಧದದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ" ಎಂದು ತಿಳಿಸಿದರು.

"ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು" ಎಂದು ಮಾಹಿತಿ ನೀಡಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ

ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಸಂಸ್ಥೆಯ ತನಿಖೆ ಬಗ್ಗೆ ಕೇಳಿದಾಗ, "ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನೂ ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ" ಎಂದು ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಇದೇ ಜ. 21 ರಂದು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಆಗಲಿದ್ದು, ಎಐಸಿಸಿ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ @DKShivakumar ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.#ನಿಮಗಿದು_ತಿಳಿದಿರಲಿ pic.twitter.com/UorV8jdKVH

— Karnataka Congress (@INCKarnataka) January 18, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X