Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ...

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ9 Dec 2025 11:57 PM IST
share
ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಕಿವಿಮಾತು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. 2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು.

ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನ ಮತ್ತೆ ಸೇರಿದಾಗ ಮಾತನಾಡಿದ ಮುಖ್ಯಮಂತ್ರಿಗಳು, ನಂತರ ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ವಿರೋಧ ಪಕ್ಷದವರು ಮಾತನಾಡುವಾಗ ಸುಮ್ಮ ಸುಮ್ಮನೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ನಾಯಕರು ಮಣಿದಾಗ ಮಾತ್ರ ಮಾತನಾಡಬೇಕು. ಯಾರೇ ಆದರೂ ಚರ್ಚೆಗೆ ಅಡ್ಡಿಪಡಿಸಬಾರದು ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚಿಸುವ ವೇಳೆ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂಬೆಲ್ಲಾ ಸುಳ್ಳು ಹೇಳಿದ್ದಾರೆ. ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ನಷ್ಟ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು… pic.twitter.com/UP5bhJPk0p

— CM of Karnataka (@CMofKarnataka) December 9, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X