Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು...

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿ ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ2 Jan 2026 11:13 PM IST
share
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿ ಪ್ರಭಾಕರ್

ಬೆಂಗಳೂರು ಜ2: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಮಾತನಾಡಿದ ಕೆ.ವಿ.ಪ್ರಭಾಕರ್, ಇಂದು ಇಲ್ಲಿ ಸನ್ಮಾನಿತರಾಗುತ್ತಿರುವ ಐವರು ಪತ್ರಕರ್ತರಿಗೆ ಮತ್ತು ಅವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ ಎಂದು ಹೇಳಿದರು.

ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ ಕಾಲಘಟ್ಟದ ಎರಡೂ ಸಂದರ್ಭಗಳ ಪತ್ರಿಕೋದ್ಯಮಕ್ಕೂ ಸಾಕ್ಷಿಯಾಗಿರುವವರು. ತಂತ್ರಜ್ಞಾನ ಇಲ್ಲದಿದ್ದಾಗ ಸತ್ಯವನ್ನು ಹುಡುಕಿ ಹೊರತಂದ ಇವರ ಕಾಳಜಿ, ಪರಿಶ್ರಮ, ವೃತ್ತಿಪರತೆಗೆ ಸನ್ಮಾನವು ಒಂದು ರೀತಿಯ ಮಾನ್ಯತೆ ತಂದು ಕೊಟ್ಟಿದೆ ಎಂದು ಹೇಳಿದರು.

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.

ಸಾಮಾಜಿಕ ಜವಾಬ್ದಾರಿಯನ್ನು ಗುರುತಿಸುವುದೂ ಜವಾಬ್ದಾರಿಯುತ ಕೆಲಸ. ಸಾಮಾಜಿಕ ಕಾಳಜಿಗಳನ್ನು ಕಾಪಾಡಿಕೊಂಡಿರುವವರನ್ನು ಗುರುತಿಸುವುದು ಮತ್ತು ಸನ್ಮಾನಿಸುವುದರಿಂದ ಸಮಾಜವು ಪ್ರಾಮಾಣಿಕ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂಬ ಸಂದೇಶ ಕೊಟ್ಟಂತೆ ಆಗುತ್ತದೆ. ಇದು ಸಮಾಜದಲ್ಲಿ ಸತ್ಯವಂತರ, ಸಾಮಾಜಿಕ ಕಾಳಜಿ ಇಟ್ಟುಕೊಂಡವರ ಪರವಾಗಿ ನಿಲ್ಲುವ ಧೈರ್ಯವನ್ನು ತುಂಬುತ್ತದೆ. ಇತಿಹಾಸದ ಕೊಂಡಿಯಾಗಿ ಹಿರಿಯ ಪತ್ರಕರ್ತರು ಒಂದು ಕಾಲಘಟ್ಟದ ಜೀವಂತ ಇತಿಹಾಸವಿದ್ದಂತೆ. ಅವರನ್ನು ಸನ್ಮಾನಿಸುವ ನೆಪದಲ್ಲಿ ಅವರ ಅನುಭವದ ನುಡಿಗಳನ್ನು ದಾಖಲಿಸುವ ಕೆಲಸವನ್ನೂ ಕಾರ್ಯನಿರತ ಪತ್ರಕರ್ತರ ಸಂಘ ಮಾಡಬೇಕು ಎಂದು ಕರೆ ನೀಡಿದರು.

ವೃತ್ತಿಜೀವನದಿಂದ ನಿವೃತ್ತರಾದ ನಂತರ ಅಥವಾ ಇಳಿ ವಯಸ್ಸಿನಲ್ಲಿ ಅನೇಕ ಪತ್ರಕರ್ತರು ಆರ್ಥಿಕ ಅಥವಾ ಮಾನಸಿಕ ಏಕಾಂಗಿತನ ಅನುಭವಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಮಯದಲ್ಲಿ ಪತ್ರಕರ್ತರ ಸಂಘಗಳು, ಪ್ರೆಸ್ ಕ್ಲಬ್ ನಂತಹ ಸಂಸ್ಥೆಗಳು ಅವರನ್ನು ಗುರುತಿಸಿ ಸನ್ಮಾನಿಸಿದರೆ, ಅವರಿಗೆ ಆತ್ಮವಿಶ್ವಾಸ ಮತ್ತು ಗೌರವಯುತ ಬದುಕು ನಡೆಸಲು ನೆರವಾಗುತ್ತದೆ. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಈ ಸ್ತಂಭವನ್ನು ಭದ್ರವಾಗಿ ಕಟ್ಟಿದವರನ್ನು ಸನ್ಮಾನಿಸುವುದು ಎಂದರೆ ನಾವು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿದಂತೆ ಎಂದು ಭಾವಿಸುತ್ತೇನೆ ಎಂದರು.

ಸಂಕ್ರಾಂತಿ ವೇಳೆಗೆ ಸರಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ ಎಂದು ಕೆವಿಪಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯೋತ್ಸವ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನೀಫ್, ಶಾಂತಕುಮಾರ್ ಹಾಗೂ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ವೆಂಕಟ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಸೇರಿ ಸಂಘದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X