Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತಿ ಗಣತಿ ರಾಜಕೀಯ ಅಸ್ತ್ರವಾಗಿ...

ಜಾತಿ ಗಣತಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿರುವುದು ದೊಡ್ಡ ದುರಂತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

"ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ24 Dec 2023 8:42 PM IST
share
ಜಾತಿ ಗಣತಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿರುವುದು ದೊಡ್ಡ ದುರಂತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ರಾಜ್ಯ ಕಾಂಗ್ರೆಸ್‌ ಸರಕಾರ ಜಾತಿ ಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಎಂಬಿಎ ಕಾಲೇಜು ಮೈದಾನ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಮಾತನಾಡಿದ ಅವರು, ಎಲ್ಲಾ ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಜಾತಿ ಗಣತಿ ಬೇಕು. ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳವ ಜಾತಿ ಗಣತಿ ಸದ್ದು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜಕಾರಣ ಮಾಡಲು ಹಲವಾರು ಮಾರ್ಗಗಳು ಇವೆ ಎಂದರು.

ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಹುನ್ನಾರ ನಡೆಯುತ್ತದೆ. ಜಾತಿ ಗಣತಿ ಬಗ್ಗೆ ಸ್ಪಷ್ಟ ನೀತಿ ಇರಬೇಕು. ಈಗ ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿದೆ, ಅದು ಜಾತಿ ಗಣತಿಯಲ್ಲ. ಯಾವ್ಯಾವ ಸಮುದಾಯದಲ್ಲಿ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವರದಿ ತಯಾರಿ ಮಾಡಲಾಗಿದೆ. ಆದರೆ ಅದನ್ನೇ ಜಾತಿ ಗಣತಿ ಎಂದು ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಹಲವಾರು ಬಾರಿ ಪ್ರಸ್ತಾಪ ಮಾಡಿದೆ ಎಂದರು.

ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ. ಅಂದರೆ ನಮ್ಮೊಂದಿಗೆ ಎಲ್ಲಾ ತಳ ಸಮುದಾಯ ಸೇರಿವೆ. ಅದರೆ, ನಮ್ಮೊಂದಿಗಿನ ಒಳಪಂಗಡಗಳನ್ನು ಭೇರ್ಪಡಿಸುವ ಕೆಲಸ ಆಗಿತ್ತು. ಸಂಸ್ಕಾರದ ತಿರುಳು ಗಟ್ಟಿಯಾಗಿ ನಮ್ಮಲ್ಲಿ ಉಳಿದಿದೆ. ಸಮಾಜದಲ್ಲಿ ಗೊಂದಲ ನಿರ್ಮಾಣ ಮಾಡಬಾರದು ಪಾರದರ್ಶಕ, ವೈಜ್ಞಾನಿಕ ಜನಗಣತಿ ಆಗಬೇಕು. ಸಮಾಜಕ್ಕೆ ಅನ್ಯಾಯ ಆಗಬಾರದು ಎಂದರು.

ಮಹಾಸಭಾ ಅಂದರೆ ಇದೊಂದು ದೊಡ್ಡ ಸಂಸಾರ. ಮೊಮ್ಮಕ್ಕಳು, ಸೊಸೆಯಂದಿರು ಬಂಧಿಗಳಿರುವ ಕುಟುಂಬ. ಈ ಅಧಿವೇಶನ ಕಳೆದ ವರ್ಷ ಆಗಬೇಕಿತ್ತು. ಚುನಾವಣೆ ವರ್ಷ ಆದ ಹಿನ್ನಲೆಯಲ್ಲಿ ಈ ಬಾರಿ ಯಶಸ್ವಿಯಾಗಿ ಅಧಿವೇಶನ ನಡೆದಿದೆ. ಅಧಿವೇಶನ ಯಶಸ್ಸಿಗಾಗಿ ಶಿವಶಂಕರಪ್ಪ ಅವರನ್ನು ಅಭಿನಂದಿಸುತ್ತೇನೆ. ದೂರದೃಷ್ಠಿ ಸಮಾಜ ನಮ್ಮದು. ಯಾರು ಏನೇ ಷಡ್ಯಂತ್ರ ಮಾಡಲಿ, ಯಾರು ಆತಂಕ ಪಡುವ ಅಗತ್ಯವಿಲ್ಲ. ನಮ್ಮ ವಿಚಾರದಾರೆ, ಆತ್ಮಸಾಕ್ಷಿ ನಮ್ಮನ್ನೆಲ್ಲ ಒಗ್ಗೂಡಿಸಲಿದೆ. ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಎಲ್ಲೆಡೆ ಹೆಣ್ಮಕ್ಕಳಿಗೆ ಹಾಸ್ಟೆಲ್ ಮಾಡಿದ್ದು ಮಠಮಾನ್ಯಗಳು. ಯಾರು ಸಹ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ನಮ್ಮನ್ನು ಹೊರತುಪಡಿಸಿ ರಾಜ್ಯ ಆಳೋದು, ಕಾರ್ಯಕ್ರಮ ರೂಪಿಸುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X