ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಆದರೆ, ಚಳಿಗಾಲದ ಅಧಿವೇಶನಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ ಭೇಟಿ ನೀಡಿರುವ ಕುರಿತು ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಆಗಲಿದೆ ಎನ್ನುವುದು ನನಗೆ ಗೊತ್ತಿಲ್ಲ. ಸದ್ಯ ನಮ್ಮ ಮುಂದೆ ಇರುವ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಯಶಸ್ವಿಯಾಗಿ ನಡೆಯಬೇಕು. ಯಾವುದೇ ಸಮಸ್ಯೆ ಆಗದಂತೆ ಅಧಿವೇಶನ ನಡೆಸಬೇಕು ಎಂದರು.
ಸದನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗಳು ನಡೆಯಬೇಕು. ಈ ಬಗ್ಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಜತೆಗೆ, ಬೆಳಗಾವಿಯಲ್ಲಿ ಸರಕಾರಿ ಪ್ರಕ್ರಿಯೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ 8ರಿಂದ ಅಧಿವೇಶ ಆರಂಭಗೊಳ್ಳಲಿದೆ ಎಂದು ಖಾದರ್ ಉಲ್ಲೇಖಿಸಿದರು.
Next Story





