Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳೆಯರಿಗಾಗಿ ಶೀಘ್ರದಲ್ಲಿ ‘ಋತುತಾರೆ’...

ಮಹಿಳೆಯರಿಗಾಗಿ ಶೀಘ್ರದಲ್ಲಿ ‘ಋತುತಾರೆ’ ಯೋಜನೆ : ಆರೋಗ್ಯ ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ4 Aug 2026 8:27 PM IST
share
ಮಹಿಳೆಯರಿಗಾಗಿ ಶೀಘ್ರದಲ್ಲಿ ‘ಋತುತಾರೆ’ ಯೋಜನೆ : ಆರೋಗ್ಯ ಸಚಿವ ಯು.ಟಿ.ಖಾದರ್

ಬೆಂಗಳೂರು : ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಋತುಬಂಧ ಸಮಸ್ಯೆಗಳು ಹಾಗೂ ಮಾನಸಿಕ, ಆರೋಗ್ಯ ಒತ್ತಡ ನಿರ್ವಹಣೆಗಾಗಿ ರಾಜ್ಯ ಸರಕಾರ ಮಹಿಳೆಯರಿಗಾಗಿ ಶೀಘ್ರದಲ್ಲಿ ವಿಶೇಷವಾದ ‘ಋತುತಾರೆ' ಎಂಬ ನೂತನ ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳವಾರ ನಗರದ ಆರೋಗ್ಯಸೌಧದಲ್ಲಿ ಆರೋಗ್ಯ ಋತುಬಂಧ, ಆರೋಗ್ಯ ಮಹಿಳೆ ಹಾಗೂ ಆರೋಗ್ಯ ಕುಟುಂಬ ವಿಷಯದ ಕುರಿತು ನಟಿ ರಮ್ಯಾ ಹಾಗೂ ಇತರೆ ತಜ್ಞರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ನಟಿ ರಮ್ಯಾ ಮತ್ತು ಡಾ.ಜೋಷ್ನಾ ಅವರ ವಿಶೇಷ ಆಸಕ್ತಿ, ಮಹಿಳಾ ಸಮುದಾಯದ ಮೇಲಿರುವ ಕಾಳಜಿ ಮೇರೆಗೆ ಭವಿಷ್ಯದಲ್ಲಿ ಋತುತಾರೆ ಯೋಜನೆಯನ್ನು ತರಲು ಯೋಚಿಸಿದ್ದೇವೆ. ನಟಿ ರಮ್ಯಾ ಈ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವೈದ್ಯರ ಮಾಹಿತಿ ಪ್ರಕಾರ ಬಹಳಷ್ಟು ಸಹೋದರಿಯರು ಋತುಬಂಧದ ಕಾಲಘಟ್ಟದಲ್ಲಿ ಮಾನಸಿಕ ತೊಂದರೆಗೆ ಒಳಪಡುತ್ತಿದ್ದಾರೆ. ಅಂತಹ ಸಂದರ್ಭದಲ್ಲಿರುವವರನ್ನು ಗುರುತಿಸಿಕೊಂಡು ಅವರಿಗೆ ಬೇಕಾದಂತ ಜನತಾ ಕಾರ್ಯಕ್ರಮಗಳ ಮೂಲಕ ಮಾಹಿತಿ ಕೊಡಲಾಗುತ್ತದೆ. ಆ ಕಾಲಘಟ್ಟದಲ್ಲಿ ಅವರ ಜೀವನ ಶೈಲಿ, ಊಟೋಪಚಾರ ಹೇಗಿರಬೇಕು, ನಿದ್ರೆಯ ಸಮಯ ಎಷ್ಟಿರಬೇಕು ಎಂದು ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂಬಂಧ ಮಹಿಳಾ ತಜ್ಞೆ ಡಾ.ಜೋಷ್ನಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಹೋಗಿ ಮಹಿಳೆಯರ ದತ್ತಾಂಶ ತೆಗೆದುಕೊಳ್ಳಲಿದ್ದು, ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೆನೋಪಾಸ್ ಕುರಿತು ಯಾವೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ತಿಳಿಸಲಿದ್ದಾರೆ. ಈ ಯೋಜನೆ ಹಂತಹಂತವಾಗಿ ಕಾರ್ಯರೂಪಕ್ಕೆ ತಂದು ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿ ಮಾಡಿ ದೇಶಾದ್ಯಂತ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗುತ್ತದೆ ಎಂದು ಖಾದರ್ ತಿಳಿಸಿದರು.

ಈ ವೇಳೆಯಲ್ಲಿ ನಟಿ ರಮ್ಯಾ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

Tags

U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X