ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಸಿಐಡಿಯಿಂದ ಕ್ಲೀನ್ಚಿಟ್

ಬಿ.ನಾಗೇಂದ್ರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್ಚಿಟ್ ನೀಡಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಂದಿನ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. ನಿಗಮದ ಹಣವನ್ನು ನಾಗೇಂದ್ರ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸದೆ ಸಾಕ್ಷಿಗಳನ್ನಾಗಿ ಹೆಸರಿಸಲಾಗಿದೆ ಎಂದು ತಿಳಿದುಬಂದಿದೆ.
ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಹಾಗೂ ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ.




