Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ : ಆರ್‌.ಅಶೋಕ್

"ಜೂನ್‌.6ರೊಳಗೆ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕು, ಇಲ್ಲದಿದ್ದರೆ‌ ರಾಜ್ಯಾದ್ಯಂತ ಹೋರಾಟ"

ವಾರ್ತಾಭಾರತಿವಾರ್ತಾಭಾರತಿ30 May 2024 5:17 PM IST
share
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ : ಆರ್‌.ಅಶೋಕ್

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼದಲಿತರ ಹಣ ನುಂಗಿದ ಕಾಂಗ್ರೆಸ್‌ ಎಂಬ ಬ್ಯಾನರ್‌ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ʼಟಕಾಟಕ್‌ʼ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ʼಟಕಾಟಕ್‌ʼ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆʼ ಎಂದರು.

"ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ ಎಂದರು.

ಹಣ ವರ್ಗಾಯಿಸಲು ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಪತ್ರದಲ್ಲಿ ತಿಳಿಸಿದ್ದಾರೆ. ಜಿ.ಪದ್ಮನಾಭ್‌, ಸುಜಾ ಮೊದಲಾದ ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿದ್ದಾರೆ. ಈ ಪತ್ರದಲ್ಲಿ ಹಗರಣದ ಸಂಪೂರ್ಣ ವಿವರವನ್ನು ದಾಖಲೆಯೊಂದಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ಮಹಿಳೆಯರ ಖಾತೆಗೆ ಟಕಾಟಕ್‌ ಎಂದು ಹಣ ಹಾಕುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ನಿಗಮದಿಂದ ಆಗಾಗ್ಗೆ ಕೋಟ್ಯಂತರ ರೂಪಾಯಿ ಟಕಾಟಕ್‌ ಆಗಿ ಕಾಂಗ್ರೆಸ್‌ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ. 25 ಸಾವಿರ ಕೋಟಿ ರೂ. ದಲಿತರ ಹಣ ಟಕಾಟಕ್‌ ಎಂದು ಕಾಣೆಯಾಗಿದೆ. ಬಿತ್ತನೆ ಬೀಜಗಳ ದರ ಟಕಾಟಕ್‌ ಎಂದು ಏರಿಕೆಯಾಗಿದೆ. ಭಯೋತ್ಪಾದನೆ ಟಕಾಟಕ್‌ ಎಂದು ಮೇಲೆದ್ದಿದೆ ಎಂದರು.

ಕೊಲೆ ಪ್ರಕರಣ ದಾಖಲಿಸಿ:

ಹಿಂದೆ ಕೆ.ಎಸ್‌.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X