Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಮಾಜಿ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ವಾರ್ತಾಭಾರತಿವಾರ್ತಾಭಾರತಿ14 Jan 2026 10:32 PM IST
share
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಲವು ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಯಾವುದೇ ದಾಖಲೆ ಹಾಜರುಪಡಿಸಿಲ್ಲ ಎಂದು ಹೇಳಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್‌ ಶಾಸಕ ನಾಗೇಂದ್ರಗೆ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಾಲ್ಮೀಕಿ ನಿಗಮದ ಹಣ ದುರ್ಬಳಕೆ, ಸರಕಾರಿ ಮತ್ತು ಖಾಸಗಿ ವ್ಯಕ್ತಿಗಳ ನೆರವಿನಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆಯ (ಕೆಜಿಟಿಟಿಐ) ಟೆಂಡರ್‌ ಪ್ರಕ್ರಿಯೆ ತಿರುಚಿ ತಮಗೆ ಬೇಕಾದ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟು ಲಂಚ ಸ್ವೀಕರಿಸಿದ ಆರೋಪ ಕುರಿತು ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಪುರಸ್ಕರಿಸಿದ್ದಾರೆ.

ಪ್ರಕರಣದಲ್ಲಿ ನಾಗೇಂದ್ರ ಅವರನ್ನು ಬಂಧಿಸಿದರೆ 2 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಪಡೆದು ಬಿಡುಗಡೆ ಮಾಡಬೇಕು. ಆರೋಪಿಯು ಪ್ರಾಸಿಕ್ಯೂಷನ್‌ ಸಾಕ್ಷಿಯನ್ನು ಬೆದರಿಸಬಾರದು ಅಥವಾ ತಿರುಚಬಾರದು. ಇಂದಿನಿಂದ 15 ದಿನಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಿ, ತನಿಖೆಗೆ ಸಹಕರಿಸಬೇಕು. ಇಂಥದ್ದೇ ಅಪರಾಧದಲ್ಲಿ ಭಾಗಿಯಾಗಬಾರದು. ಪೂರ್ವಾನುಮತಿ ಪಡೆಯದೇ ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು. ಸಿಬಿಐ ಅಂತಿಮ ವರದಿ ಸಲ್ಲಿಸುವವರೆಗೆ ಅಥವಾ ಮುಂದಿನ 3 ತಿಂಗಳವರೆಗೆ ತಿಂಗಳ ಎರಡನೇ ಶನಿವಾರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತನಿಖಾಧಿಕಾರಿಯ ಮುಂದೆ ಹಾಜರಿರಬೇಕು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ಆದೇಶದಲ್ಲೇ‌ನಿದೆ?

ವಾಲ್ಮೀಕಿ ನಿಗಮದ ಹಣವನ್ನು ಬೇರೆ ಬೇರೆ ವ್ಯಕ್ತಿಗಳ ಖಾತೆಗೆ ವರ್ಗಾಯಿಸಲಾಗಿದ್ದು, ಅದರ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಲಾಗಿದೆ. ಸಿಬಿಐನ ಈ ವಾದವನ್ನು ಒಪ್ಪಿಕೊಳ್ಳುವುದಾದರೆ ಹಣ ವರ್ಗಾವಣೆಯ ಹೆಣಿಗೆ ಮತ್ತು ಅಕ್ರಮ ಹಣ ವರ್ಗಾವಣೆಯ ಕುರಿತು ತನಿಖೆ ನಡೆಸುವ ಸೂಚನೆ ನೀಡುತ್ತಿದೆ. ಹೀಗಾದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಾಲ್ಮೀಕಿ ನಿಗಮದ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ದಾಖಲಿಸಿರುವ ಪ್ರಕರಣದ ಕುರಿತು ಉತ್ತರಿಸಬೇಕಿದೆ. ಆದರೆ, ಆಕ್ಷೇಪಣೆ ಹೊರತುಪಡಿಸಿ, ಸಿಬಿಐ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಕೆಜಿಟಿಟಿಐ ಟೆಂಡರ್‌ ಅನ್ನು ಸರ್ಕಾರದ ಪೋರ್ಟಲ್‌ ಮೂಲಕ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದ ಮತ್ತು ಟೆಂಡರ್‌ ಅನುಷ್ಠಾನವಾಗಿರುವ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಇ-ಆಡಳಿತ ಪರಿಶೀಲನೆಯ ಬಳಿಕ ಟೆಂಡರ್‌ ಹಣ ಬಿಡುಗಡೆ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಏಕೆ ಮತ್ತೆ ತನಿಖೆ ನಡೆಸಬೇಕು ಎಂಬುದಕ್ಕೆ ಸಿಬಿಐ ಉತ್ತರಿಸಬೇಕಿದೆ ಎಂದು ಕೋರ್ಟ್ ಹೇಳಿದೆ.

ಸಿಬಿಐ ತನಿಖಾ ವ್ಯಾಪ್ತಿ ಮತ್ತು ಹಂದರ ವಿಭಿನ್ನವಾಗಿದ್ದು, ವಾಲ್ಮೀಕಿ ನಿಗಮದ ಹಣ ಮತ್ತು ಇತರೆ ಹಣ ಎಲ್ಲಿ ಹೋಗಿದೆ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ. ಯಾವ ರೀತಿಯಲ್ಲಿ ಅಪರಾಧ ಪ್ರಕ್ರಿಯೆ ನಡೆದಿದೆ ಎಂಬುದರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ, ಇದನ್ನು ಪೂರಕ ದಾಖಲೆಗಳೊಂದಿಗೆ ಸಿಬಿಐ ಸಮರ್ಥಿಸಿಲ್ಲ. ತನಿಖೆಯ ವಿಧಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬಾರದು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಮೇಲ್ನೋಟಕ್ಕೆ ಪ್ರಕರಣ ಕಂಡರೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದಾಗಿದೆ. ಈ ನೆಲೆಯಲ್ಲಿ ಅರ್ಜಿದಾರ ನಾಗೇಂದ್ರ ಅವರು ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿದ್ದಾರೆ. ಆದ್ದರಿಂದ, ಕಠಿಣ ಷರತ್ತು ವಿಧಿಸಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

Tags

Valmiki Development Corporation scamAnticipatory bailB. Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X