Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮೀಸಲಾತಿ ಗೊಂದಲ’ ನಿವಾರಣೆಗೆ ಪ್ರತ್ಯೇಕ...

‘ಮೀಸಲಾತಿ ಗೊಂದಲ’ ನಿವಾರಣೆಗೆ ಪ್ರತ್ಯೇಕ ಸಭೆ; ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ5 July 2023 7:34 PM IST
share
‘ಮೀಸಲಾತಿ ಗೊಂದಲ’ ನಿವಾರಣೆಗೆ ಪ್ರತ್ಯೇಕ ಸಭೆ; ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಜು. 5: ‘ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಬಜೆಟ್ ಅಧಿವೇಶನ ಮುಗಿದ ನಂತರ ರಾಜ್ಯದ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ತಮ್ಮನ್ನು ಭೇಟಿ ಮಾಡಿದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗದ ಮನವಿ ಸ್ಪೀಕರಿಸಿದ ಬಳಿಕ ಮಾತನಾಡಿದ ಅವರು, ‘ಹಿಂದಿನ ಸರಕಾರ ಮೀಸಲಾತಿ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ’ ಎಂದು ದೂರಿದರು.

‘ಮುಸ್ಲಿಮರಿಗೆ ಶೇ.4ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ.2ರಷ್ಟು ಮೀಸಲಾತಿ ನೀಡಿದೆ. ಇದೇ ವೇಳೆ 2-ಸಿ, 2-ಡಿ ಎಂದು ಎರಡೂ ಪ್ರತ್ಯೇಕ ವಿಭಾಗವನ್ನು ಸೃಷ್ಟಿ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

‘ನಕಲಿ ಜಾತಿ ಪ್ರಮಾಣ ಪತ್ರ’ಕ್ಕೆ ಕಡಿವಾಣ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಜಾತಿ ಪ್ರಮಾಣಪತ್ರ ವಿತರಣೆಯಾಗುತ್ತಿರುವ ಬಗ್ಗೆ ಸಿಆರ್‍ಇ ಸೆಲ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ವಿಜಯಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರರ ಸಮುದಾಯಗಳನ್ನು ಎಸ್‍ಟಿಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ.

ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾಲರರನ್ನು ಮಾತ್ರ ಎಸ್‍ಟಿಗೆ ಸೇರಿಸಲಾಗಿದ್ದು, ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕಾತಿ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಮೀಸಲಾತಿಯನ್ನು ಸಂವಿಧಾನದ 9ನೆ ಪರಿಚ್ಛೇಧಕ್ಕೆ ಸೇರಿಸಲು ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರಕಾರ ಸೃಷ್ಟಿಸಿದ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ವಾಲ್ಮೀಕಿ ಸಮುದಾಯದ 14 ಶಾಸಕರು, ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X