Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ವಂದೇ ಮಾತರಂ’ ಗೀತೆ | ಮೊದಲ ಎರಡು...

‘ವಂದೇ ಮಾತರಂ’ ಗೀತೆ | ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ10 Sept 2026 6:11 PM IST
share
‘ವಂದೇ ಮಾತರಂ’ ಗೀತೆ | ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರಕಾರ ಆದೇಶ

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ಗಾಯನ ಸಂಬಂಧ ಕೇಂದ್ರ ಸರಕಾರದ ನಿರ್ಧಾರಕ್ಕೆ ಆಕ್ಷೇಪಿಸಿರುವ ಕರ್ನಾಟಕ ಸರಕಾರ, ಗೀತೆಯ 6 ಚರಣಗಳ ಬದಲು ಸರಕಾರಿ ಕಾರ್ಯಕ್ರಮಗಳಲ್ಲಿ ಕೇವಲ ‘ಎರಡೇ ಚರಣಗಳನ್ನು ಮಾತ್ರವೇ ಹಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜಕೀಯ) ಆದೇಶ ಹೊರಡಿಸಿದೆ.

ಗುರುವಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಆದೇಶ ಹೊರಡಿಸಿದ್ದು, ‘ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರಕಾರವು ಪರಿಗಣಿಸಿದೆ. ಆ ಹಿನ್ನೆಲೆಯಲ್ಲಿ, ಸಂಪುಟದ ತೀರ್ಮಾನದಂತೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ಉಳಿದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ ಗೀತೆ’ಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ತಿಳಿಸಲಾಗಿದೆ.

Tags

Vande Mataramstate government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X