Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ವಾರ್ತಾಭಾರತಿ’ ಅಂಕಣಕಾರ ಸನತ್ ಕುಮಾರ್...

‘ವಾರ್ತಾಭಾರತಿ’ ಅಂಕಣಕಾರ ಸನತ್ ಕುಮಾರ್ ಬೆಳಗಲಿಗೆ ‘ರಾಷ್ಟ್ರೀಯ ಮಾಧ್ಯಮ ಶ್ರೀ’ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ6 Aug 2023 8:58 PM IST
share
‘ವಾರ್ತಾಭಾರತಿ’ ಅಂಕಣಕಾರ ಸನತ್ ಕುಮಾರ್ ಬೆಳಗಲಿಗೆ ‘ರಾಷ್ಟ್ರೀಯ ಮಾಧ್ಯಮ ಶ್ರೀ’ ಪ್ರಶಸ್ತಿ ಪ್ರದಾನ

ಮುಂಬೈ, ಆ. 6: ಹಿರಿಯ ಪತ್ರಕರ್ತ ಹಾಗೂ ‘ವಾರ್ತಾಭಾರತಿ’ ಪತ್ರಿಕೆಯ ಅಂಕಣಕಾರರೂ ಆಗಿರುವ ಸನತ್ ಕುಮಾರ್ ಬೆಳಗಲಿ ಅವರಿಗೆ ಮಹಾರಾಷ್ಟ್ರ ರಾಜ್ಯದ ಕನ್ನಡ ಪತ್ರಕರ್ತರ ಸಂಘ ಇವರಿಂದ ನೀಡುವ ಪ್ರತಿಷ್ಠಿತ ‘ರಾಷ್ಟ್ರೀಯ ಮಾಧ್ಯಮ ಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ರವಿವಾರ ಮುಂಬೈನಲ್ಲಿ ಕನ್ನಡ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಕೆ.ಟಿ.ವೇಣುಗೋಪಾಲ್ ಮಾಧ್ಯಮ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ‘ಮಹಾರಾಷ್ಟ್ರದಲ್ಲಿ ಕನ್ನಡ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರಕ್ಕೆ 1ಕೋಟಿ ರೂ.ನೆರವು ನೀಡಬೇಕು’ ಎಂದು ಮನವಿ ಮಾಡಿದರು.

‘ಪತ್ರಕರ್ತ’ ಸರಕಾರ-ಸಮಾಜದ ಮಧ್ಯೆ ಸೇತುವೆ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕಪಸಮ (ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರ) ಹರಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಮುಂಬೈನಂತಹ ಮಹಾ ನಗರದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಪತ್ರಿಕೆಗಳನ್ನು ಹುಟ್ಟುಹಾಕುವುದು ಯಶಸ್ವಿಯಾಗಿ ನಡೆಸುವುದು ಸವಾಲಿನದ್ದು. ಈ ಸವಾಲನ್ನು ಕಪಸಮ ಅರ್ಥಪೂರ್ಣವಾಗಿ ನಿಭಾಯಿಸಿದೆ’ ಎಂದು ಅವರು ನುಡಿದರು.

‘ಆಧುನಿಕ ತಂತ್ರಜ್ಞಾನ ಮಾಹಿತಿ ಜಗತ್ತು ಮತ್ತು ಪತ್ರಿಕಾ ವೃತ್ತಿಗೆ ವ್ಯಾಪಕ ಅವಕಾಶಗಳನ್ನು ತೆರೆದಿಟ್ಟಿದೆ. ಆದರೆ ಪತ್ರಕರ್ತರ ಬದುಕು ಮಾತ್ರ ಸಮಸ್ಯೆಗಳಲ್ಲೇ ಮುಳುಗಿದೆ. ಮಹಾರಾಷ್ಟ್ರ ನೆಲದಲ್ಲಿ ಕನ್ನಡ ಪತ್ರಕರ್ತರ ಸಮಸ್ಯೆಗಳಿಗೆ ಕನ್ನಡ ಪತ್ರಕರ್ತರ ಸಂಘ, ಮಹಾರಾಷ್ಟ್ರ ಬಹಳ ಹೃದಯಸ್ಪರ್ಷಿಯಾಗಿ ಸ್ಪಂದಿಸುತ್ತಿದೆ ಎನ್ನುವುದು ಸಮಾಧಾನದ ಸಂಗತಿ’ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಂಬೈ ಬಂಟ್ಸ್ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಯ ಶ್ರೀಕೃಷ್ಣ, ಎಲ್.ವಿ.ಅಮೀನ್ ಸೇರಿ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X