Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಸ್ತೆ ಗುಂಡಿಗಳನ್ನು ಶೀಘ್ರದಲ್ಲೇ...

ರಸ್ತೆ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚದಿದ್ದರೆ ‘ಬೆಂಗಳೂರು ಬಂದ್’ : ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ18 Oct 2025 8:56 PM IST
share
ರಸ್ತೆ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚದಿದ್ದರೆ ‘ಬೆಂಗಳೂರು ಬಂದ್’ : ವಾಟಾಳ್ ನಾಗರಾಜ್

ಬೆಂಗಳೂರು, ಅ.18 : ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚದಿದ್ದರೆ ಬೆಂಗಳೂರು ಬಂದ್ ಮಾಡಬೇಕಾಗುತ್ತೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ, ಶನಿವಾರ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಹತ್ತಿರ ‘ಎತ್ತಿನ ಬಂಡಿ’ ಓಡಿಸುವ ಮೂಲಕ ವಿನೂತನ ಚಳವಳಿ ನಡೆಸಿ, ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಕೇವಲ ಗುಂಡಿಗಳ ಸಮಸ್ಯೆ ಮಾತ್ರವಲ್ಲ, ಕಾನೂನು ಸುವ್ಯವಸ್ಥೆಯೂ ಹದಗೆಟ್ಟಿದೆ. ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಮಾಡಲಾಗಿದೆ. ಹೀಗೆ ಆದರೆ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತದೆ. ಎಲ್ಲವುಗಳ ವಿರುದ್ಧ ಬೆಂಗಳೂರು ಬಂದ್‍ಗೆ ಕರೆ ಕೊಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

‘ರಸ್ತೆಗಳಲ್ಲಿ ಗುಂಡಿ ಬಿದ್ದಿವೆ’ ಎಂದು ವಿಶ್ವದಮಟ್ಟದಲ್ಲಿ ನಮಗೆ ಅನ್ಯಾಯವಾಯಿತು ಎಂದು ಮಾತನಾಡುತ್ತಾರೆ. ಮೋಹನ್‍ದಾಸ್ ಪೈ, ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ನೀವೇನೂ ಪಾಳೆಗಾರರಾ? ಬೆಂಗಳೂರಿನ ಅಭಿವೃದ್ಧಿಗೆ ಸರಕಾರಕ್ಕೆ 30ಸಾವಿರ ಕೋಟಿ ರೂ. ನೀಡಿ, ಬೆಂಗಳೂರು ಬಿಟ್ಟು ಹೋಗುತ್ತೇವೆ ಎಂದು ಕೂಗಾಡುತ್ತೀರಿ, ಹೋಗಬಹುದು ನೀವು. ಮೋಹನ್‍ದಾಸ್ ಪೈ ನಿಮ್ಮ ನಾಯಕತ್ವದಲ್ಲಿ ಎಲ್ಲರನ್ನೂ ಕರೆದುಕೊಂಡು ಹೋಗಿ. ನೀವು ಕನ್ನಡದವರಿಗೆ ಉದ್ಯೋಗ ಕೊಟ್ಟಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Tags

Vatal Nagaraj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X