Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌...

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ ನಿಧನ

ವಾರ್ತಾಭಾರತಿವಾರ್ತಾಭಾರತಿ16 April 2024 11:49 AM IST
share
ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ ನಿಧನ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್(81) ಅವರು ಇಲ್ಲಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.

1942, ಆಗಸ್ಟ್ 19ರಂದು ಹುಣಸೂರಿನಲ್ಲಿ ಶಾಮರಾವ್ ಮತ್ತು ಜಯಮ್ಮ ದಂಪತಿಯ ಪುತ್ರ ದ್ವಾರಕೀಶ್ ಅವರಿಗೆ ಚಿಕ್ಕಂದಿನಿಂದಲೇ ಸಿನಿಮಾ ಪ್ರೀತಿ ಬೆಳೆದಿತ್ತು. ಅವರಿಗೆ ಸಿ.ವಿ.ಶಂಕರ್ ನಿರ್ದೇಶನದಲ್ಲಿ ‘ವೀರಸಂಕಲ್ಪ'ದಲ್ಲಿ ನಟಿಸಲು ಮೊದಲ ಅವಕಾಶ ಸಿಕ್ಕಿತ್ತು.

ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್‍ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನಿಮಾ ನಟನೆಯನ್ನು ಆಯ್ದುಕೊಂಡರು.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ವರನಟ ಡಾ.ರಾಜ್‍ಕುಮಾರ್, ಡಾ.ವಿಷ್ಣುವರ್ಧನ್, ಹಾಗೂ ಅಂಬರೀಶ್‍ರಂತಹ ಮೇರು ನಟರೊಂದಿಗೆ ದ್ವಾರಕೀಶ್ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ‘ಪ್ರಚಂಡಕುಳ್ಳ’ ಎಂದೇ ಜನಪ್ರಿಯರಾಗಿದ್ದಾರೆ.

ಸತ್ಯ ಹರಿಶ್ಚಂದ್ರ, ಕ್ರಾಂತಿ ವೀರ, ಮೇಯರ್ ಮುತ್ತಣ್ಣ, ದೂರದ ಬೆಟ್ಟ, ಗಾಂಧಿನಗರ, ಬಾಳು ಬೆಳಗಿತು, ಬಂಗಾರದ ಮನುಷ್ಯ, ಬಹದ್ದೂರ್ ಗಂಡು, ಏಜೆಂಟ್-000, ಭಾಗ್ಯವಂತರು, ಕಳ್ಳ ಕುಳ್ಳ, ಮನೆ ಮನೆ ಕಥೆ, ಇಂದಿನ ರಾಮಾಯಣ, ಕಿಟ್ಟು ಪುಟ್ಟು, ಸಿಂಗಾಪೂರದಲ್ಲಿ ರಾಜಾ ಕುಳ್ಳ, ಗುರು ಶಿಷ್ಯರು, ಆಪ್ತಮಿತ್ರ, ಆನಂದ ಭೈರವಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.

ಬುಧವಾರ ಅಂತ್ಯಕ್ರಿಯೆ: ಸದ್ಯ ದ್ವಾರಕೀಶ್ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಬುಧವಾರ ಬೆಳಗ್ಗೆ 7.30ರ ನಂತರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಅನಂತರ ಚಾಮರಾಜಪೇಟೆಯ ಟಿ.ಆರ್.ಮೀಲ್‍ನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ನಟ ದ್ವಾರಕೀಶ್ ನಿಧನಕ್ಕೆ ಗಣ್ಯರ ಸಂತಾಪ

ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ

"ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಡಿ.ಕೆ.ಶಿವಕುಮಾರ್‌ , ಉಪಮುಖ್ಯಂತ್ರಿ

"ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ"

ಎಚ್.ಡಿ.ಕುಮಾರಸ್ವಾಮಿ , ಮಾಜಿ ಮುಖ್ಯಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X