ನಾಳೆ(ಜೂ.27) ಬೆಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಜೂ.27 ಮತ್ತು 28ರಂದು ಎರಡು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಜೂ.27ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಪಾಲ್ಗೊಳ್ಳಲಿದ್ದಾರೆ.
ಜೂ.28ರಂದು ಕಂಠೀರವ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನ ಹಾಗೂ ಅಂತರ್‍ರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ತಡೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಕಾರ್ಯಕ್ರಮದ ಭಾಗವಾಗಿ ಆಯೋಜಿಸಲಾಗಿರುವ ನಶಾ ಮುಕ್ತ ಭಾರತ ಸಮಾವೇಶದಲ್ಲಿ ಉಪರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story




