Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂತ್ರಸ್ತೆಯ ವಿವಾಹಕ್ಕೆ ಒಪ್ಪಿಗೆ: ಆರೋಪಿ...

ಸಂತ್ರಸ್ತೆಯ ವಿವಾಹಕ್ಕೆ ಒಪ್ಪಿಗೆ: ಆರೋಪಿ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Nov 2023 10:15 PM IST
share
ಸಂತ್ರಸ್ತೆಯ ವಿವಾಹಕ್ಕೆ ಒಪ್ಪಿಗೆ: ಆರೋಪಿ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಯನ್ನೇ ವಿವಾಹವಾಗುವುದಾಗಿ ಆರೋಪಿ ಭರವಸೆ ನೀಡಿದ ಮತ್ತು ವಿವಾಹಕ್ಕೆ ಸಂತ್ರಸ್ತೆ ಒಪ್ಪಿದ ಕಾರಣ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ಚಿಕ್ಕಬಳ್ಳಾಪುರದ ಆರೋಪಿಯು ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ಪುರಸ್ಕರಿಸಿದೆ. ಇದರೊಂದಿಗೆ ಆರೋಪಿ ಮತ್ತು ಸಂತ್ರಸ್ತೆ ಮದುವೆಯಾಗಿ ದಾಂಪತ್ಯ ಜೀವನ ನಡೆಸಲು ಅನುವು ಮಾಡಿಕೊಟ್ಟಿದೆ.

ಅತ್ಯಾಚಾರ ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತೆಯಾಗಿದ್ದಳು. ಸಂತ್ರಸ್ತೆ ಲೈಂಗಿಕ ದೌರ್ಜನ್ಯ ಗುರಿಯಾಗಿದ್ದಾಳೆ ಎಂಬುದು ವೈದ್ಯಕೀಯ ದಾಖಲೆಗಳು ಸಾಭೀತಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗಿರುವ ಸಂತ್ರಸ್ತೆ, ಆರೋಪಿಯನ್ನು ಮದುವೆಯಾಗುವುದಾಗಿ ದೃಢೀಕರಿಸಿ ಅಫಿಡವಿಟ್ ಸಲ್ಲಿಸಿದ್ದಾರೆ. ಮತ್ತೊಂದೆಡೆ ಆರೋಪಿ ಸಹ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೀಠ ಆದೇಶದಲ್ಲಿ ವಿವರಿಸಿದೆ.

ಪ್ರಕರಣವೇನು?: ಅರ್ಜಿದಾರನು ಸಂತ್ರಸ್ತೆ ಅಪ್ರಾಪ್ತೆಯಾಗಿದ್ದ ವೇಳೆ ನಿರಂತರವಾಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು 2021ರಲ್ಲಿ ಆತನ ವಿರುದ್ಧ ಚಿಂತಾಮಣಿ ಟೌನ್ ಠಾಣಾ ಪೊಲೀಸರು ದೂರು ದಾಖಲಿಸಿದ್ದರು. ಪ್ರಕರಣವು ಚಿಕ್ಕಬಳ್ಳಾಪುರದ ಪೋಕ್ಸೊ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿತ್ತು. ಆ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಆರೋಪಿ ಹೈಕೋರ್ಟ್‌ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯು ಇತ್ತೀಚೆಗೆ ವಿಚಾರಣೆಗೆ ಬಂದಾಗ ಸಂತ್ರಸ್ತೆಯು ತನ್ನ ತಂದೆಯೊಂದಿಗೆ ಹಾಜರಾಗಿ ಅಫಿಡವಿಟ್ ಸಲ್ಲಿಸಿದ್ದರು.

‘ಪ್ರಕರಣದಲ್ಲಿ ತಾನೇ ದೂರುದಾರಳಾಗಿದ್ದೇನೆ. ಪ್ರಕರಣದ ಎಲ್ಲ ವಾಸ್ತವಾಂಶಗಳು ನನಗೆ ತಿಳಿದಿದೆ. ಸದ್ಯ ನಾನು ವಯಸ್ಕಳಾಗಿದ್ದೇನೆ. ನಾನು ಅರ್ಜಿದಾರರೊಂದಿಗೆ ಪ್ರಣಯದ ಸಂಬಂಧದಲ್ಲಿದ್ದೇನೆ. ಆತನನ್ನು ವಿವಾಹವಾಗಲು ಹಾಗೂ ಸಂತೋಷದಿಂದ ದಾಂಪತ್ಯ ಜೀವನ ನಡೆಸಲು ಇಚ್ಛಿಸಿದ್ದೇನೆ. ನನ್ನ ವಿವಾಹವಾಗಲು ಅರ್ಜಿದಾರನೂ ಒಪ್ಪಿದ್ದಾನೆ. ಹೀಗಾಗಿ, ಅರ್ಜಿದಾರನ ವಿರುದ್ಧ ವಿಚಾರಣಾ ನ್ಯಾಯಾಲಯದ ಮುಂದಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನನ್ನದೇನು ಆಕ್ಷೇಪಣೆ ಇಲ್ಲ. ಈ ಹೇಳಿಕೆಯನ್ನು ನಾನು ಸ್ವಂತ ಇಚ್ಛೆಯಿಂದ ದಾಖಲಿಸುತ್ತಿದ್ದೇನೆ. ಈ ಅಫಿಡವಿಟ್ ಸಲ್ಲಿಸಲು ನನ್ನ ಮೇಲೆ ಯಾರೂ ಪ್ರಭಾವ ಬೀರಿಲ್ಲ ಎಂದು ಸಂತ್ರಸ್ತೆ ಅಫಿಡವಿಟ್ ತಿಳಿಸಿದ್ದರು.

ಇದೇ ವೇಳೆ ಪೊಲೀಸರು ಜೈಲಿನಿಂದ ಅರ್ಜಿದಾರ ಆರೋಪಿಯನ್ನು ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಇಚ್ಚಿಸಿದ್ದೇನೆ. ನಮ್ಮ ನಡುವಿನ ಲೈಂಗಿಕತೆ ಸಮ್ಮತಿಯಿಂದಲೇ ನಡೆದಿದೆ ಎಂದು ಆತ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದನು. ಅದನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X