Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಲ್ತುಳಿತ ಪ್ರಕರಣ | ದುರ್ಘಟನೆಯಲ್ಲಿ...

ಕಾಲ್ತುಳಿತ ಪ್ರಕರಣ | ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ : ವಿಜಯೇಂದ್ರ

ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Jun 2025 2:50 PM IST
share
ಕಾಲ್ತುಳಿತ ಪ್ರಕರಣ | ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ : ವಿಜಯೇಂದ್ರ

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3 ಎಂದು ವಾಗ್ದಾಳಿ ನಡೆಸಿದರು.

ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ), ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಪ್ರಮುಖವಾಗಿ ಆರೋಪಿಗಳೆಂದು ಎಫ್‍ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ. ಎಫ್‍ಐಆರ್ ತರುವಾಯ, ಮುಖ್ಯಮಂತ್ರಿಗಳು ಏಕಾಏಕಿ ಜಾಗೃತರಾಗಿದ್ದಾರೆ. ಮುಖ್ಯಮಂತ್ರಿಗಳು ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಕಮೀಷನರ್ ಸೇರಿ 5 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅರ್ಥಾತ್, ಮುಖ್ಯಮಂತ್ರಿಗಳು ಮೊನ್ನೆ ನಡೆದ ದುರ್ಘಟನೆ, 11 ಜನರ ಸಾವಿಗೆ ರಾಜ್ಯ ಸರಕಾರದಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಪೊಲೀಸರನ್ನು ಹರಕೆಯ ಕುರಿಯಾಗಿ ರಾಜ್ಯ ಸರಕಾರ ಮಾಡಿದೆ ಎಂದು ಆರೋಪಿಸಿದರು.

ತಪ್ಪಿಸಿಕೊಳ್ಳುವ ಷಡ್ಯಂತ್ರ:

ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದ್ದು ಎಂದು ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ವೈಫಲ್ಯಕ್ಕಾಗಿ ಬೇಹುಗಾರಿಕಾ ದಳದ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ? ಎಂದು ಕೇಳಿದರು. ಬೇಹುಗಾರಿಕಾ ದಳ ನೇರ ಸಿಎಂ ಕೆಳಗಡೆ ಬರುತ್ತದೆ, ಅವರನ್ನು ಅಮಾನತು ಮಾಡಿದರೆ ಇದು ಮುಖ್ಯಮಂತ್ರಿಗಳ ಬುಡಕ್ಕೇ ಬರಲಿದೆ. ಆದ್ದರಿಂದ ಅವರನ್ನು ಅಮಾನತು ಮಾಡಿಲ್ಲ ಎಂದು ತಿಳಿಸಿದರು.

ನಾವು 30-40 ಸಾವಿರ ಜನರು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೆವು. 2ರಿಂದ 3 ಲಕ್ಷ ಜನರು ಬಂದಿದ್ದಾರೆ. ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎನ್ನುವ ಮೂಲಕ ಬೇಹುಗಾರಿಕಾ ದಳದ ವೈಫಲ್ಯವನ್ನು ಸ್ವತಃ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪೊಲೀಸರಿಂದ ಅನುಮತಿ ನಿರಾಕರಣೆ :

ಐಪಿಎಲ್ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಹೆಮ್ಮೆಯ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ರಾಜ್ಯ ಅತ್ಯಂತ ಹೆಮ್ಮೆ ಹಾಗೂ ಖುಷಿಪಡುವ ಕೆಲಸವನ್ನು ಆರ್‌ಸಿಬಿ ತಂಡ ಮಾಡಿದ್ದು, ಅವರನ್ನು ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಲಿದ್ದೇವೆ. ಈ ಐತಿಹಾಸಿಕ ಕ್ಷಣದಲ್ಲಿ ನೀವೂ ಭಾಗಿಯಾಗಿ ಎಂದು ಸ್ವತಃ ಮುಖ್ಯಮಂತ್ರಿಗಳೇ ಸಾಮಾಜಿಕ ಜಾಲತಾಣದ ಮೂಲಕ ಕರೆ ಕೊಟ್ಟಿದ್ದರು. ಜೂ.3ರಂದು ಮ್ಯಾಚ್ ಆಗುವ ಮೊದಲೇ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎ ಕಡೆಯಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹೋಗಿದ್ದರು. ಸಂಭ್ರಮಾಚರಣೆಗೆ ಅನುಮತಿ ಕೋರಿದ್ದರು. ಲಕ್ಷೋಪ ಲಕ್ಷ ಆರ್‌ಸಿಬಿ ಅಭಿಮಾನಿಗಳು ಬರುವ ಕಾರಣ ನಾಳೆ ಸಂಭ್ರಮಾಚರಣೆಗೆ ಅನುಮತಿ ಕೊಡಲಾಗದು ಎಂದು ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಬರೆದುಕೊಟ್ಟಿದ್ದರು ಎಂದು ವಿವರಿಸಿದರು.

ಪೊಲೀಸ್ ಇಲಾಖೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿರಲಿಲ್ಲ. ಲಕ್ಷ ಲಕ್ಷ ಜನರು ಬರುವುದು ಗೊತ್ತಿದ್ದು ಹೀಗೆ ಹೇಳಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರಕ್ಕೆ ಯಾರು ಅನುಮತಿ ಕೊಟ್ಟರು ಎಂದು ಪ್ರಶ್ನಿಸಿದರು. ವಿಧಾನಸೌಧದ ಬಳಿ ಲಕ್ಷ ಲಕ್ಷ ಜನ ಆರ್‌ಸಿಬಿ ಅಭಿಮಾನಿಗಳು ಬಂದಿದ್ದರು. ಅವರಿಗೆ ಯಾರ ಅನುಮತಿ ಇತ್ತು ಎಂದು ಕೇಳಿದರು.

ಕಾನೂನುಬಾಹಿರವಾಗಿ ಕಾರ್ಯಕ್ರಮ ನಡೆದಿದೆ ಎಂದು ಎಫ್‍ಐಆರ್ ಮಾಡಿದ್ದಾರೆ. ಅಲ್ಲಿ ಅನುಮತಿ ಇಲ್ಲದಿದ್ದರೂ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ, ಅಲ್ಲಿ ಸಂಭ್ರಮಾಚರಣೆಯಲ್ಲಿ ಯಾಕೆ ಭಾಗವಹಿಸಿದ್ದರು? ಅಲ್ಲಿ ಕಪ್ ಹಿಡಿದು ಮುತ್ತಿಕ್ಕುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಳಿದರು.

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಜೆಡಿಎಸ್ ಸಂಸದ ಎಂ.ಮಲ್ಲೇಶ್ ಬಾಬು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಮತ್ತು ಜೆಡಿಎಸ್ ಮುಖಂಡರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಚ್.ಎಂ.ರಮೇಶ್ ಗೌಡ, ಆರ್. ಚೌಡ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X