Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಸರಾ ಉದ್ಘಾಟನೆ | ಬಾನು ಮುಷ್ತಾಕ್ ಜೊತೆ...

ದಸರಾ ಉದ್ಘಾಟನೆ | ಬಾನು ಮುಷ್ತಾಕ್ ಜೊತೆ ದೀಪಾ ಭಸ್ತಿಯವರನ್ನು ಆಹ್ವಾನಿಸಬಹುದಿತ್ತು: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ25 Aug 2025 6:33 PM IST
share
ದಸರಾ ಉದ್ಘಾಟನೆ | ಬಾನು ಮುಷ್ತಾಕ್ ಜೊತೆ ದೀಪಾ ಭಸ್ತಿಯವರನ್ನು ಆಹ್ವಾನಿಸಬಹುದಿತ್ತು: ವಿಜಯೇಂದ್ರ

ಬೆಂಗಳೂರು, ಆ.25: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತರ್‍ರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರೊಂದಿಗೆ ದೀಪಾ ಭಸ್ತಿಯವರನ್ನು ಆಹ್ವಾನಿಸಬಹುದಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸೋಮವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ನಮ್ಮ ಹಿಂದೂ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳನ್ನು ಒಪ್ಪಿ, ಅದರ ಬಗ್ಗೆ ನಂಬಿಕೆ ಇಟ್ಟು ಬರುವುದಾದರೆ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.

ಬಾನು ಮುಷ್ತಾಕ್ ಮತ್ತು ಕೊಡಗಿನ ದೀಪಾ ಭಸ್ತಿ ಸೇರಿ ಇಬ್ಬರಿಗೂ ಅಂತರ್‍ರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿದೆ. ರಾಜ್ಯ ಸರಕಾರವು ದಸರಾ ಉತ್ಸವಕ್ಕೆ ಬಾನು ಮುಷ್ತಾಕ್ ಜೊತೆಗೆ ದೀಪಾ ಭಸ್ತಿ ಅವರನ್ನು ಕರೆಯಬಹುದಾಗಿತ್ತು. ಅವರನ್ನು ಕರೆಯಬೇಕೆಂದು ಸಿದ್ದರಾಮಯ್ಯನವರಿಗೆ ಯಾಕೆ ಅನಿಸಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ನಂತರ ಮಾತನಾಡಿದ ಶಾಸಕ ಎಸ್.ಆರ್.ವಿಶ್ವನಾಥ್, ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಬೇಕಿದೆ. ಇದರ ಮೂಲಕ ಅಗತ್ಯವಾದಲ್ಲಿ ಹಣಕಾಸು ವಿಷಯವಾಗಿ ಈ.ಡಿ. ತನಿಖೆ ನಡೆಸಲು ಅವಕಾಶ ಆಗಲಿದೆ ಎಂದು ತಿಳಿಸಿದರು.

ಬುರುಡೆ ವ್ಯಕ್ತಿಯ ಪ್ರಾಥಮಿಕ ತನಿಖೆ ನಡೆಸುತ್ತಿದ್ದರೆ ಇಂಥ ಅಪಪ್ರಚಾರ ನಡೆದು ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ ಆಗುತ್ತಿರಲಿಲ್ಲ. ಧರ್ಮಸ್ಥಳದ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ ಎಂಬುದು ತನಿಖೆಯಿಂದ ತಿಳಿದು ಬಂದಿದೆ ಎಂದು ವಿಶ್ವನಾಥ್ ತಿಳಿಸಿದರು.

ಬುರುಡೆ ವ್ಯಕ್ತಿ ಮತ್ತು ಸುಜಾತಾ ಭಟ್ ವಿಷಯದಲ್ಲಿ ಮಾಧ್ಯಮಗಳು ಎಲ್ಲ ವಿಚಾರಗಳನ್ನು ಬೆಳಕಿಗೆ ತಂದಿವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ಎಲ್ಲ ಪಕ್ಷದವರು ಕೇಸರಿ ಧ್ವಜ ಕಟ್ಟಿ ಮಂಜುನಾಥ ಸ್ವಾಮಿ ಜೊತೆ ಇದ್ದೇವೆ ಎಂದು ರ್ಯಾಲಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಇಸ್ಲಾಮ್ ಧರ್ಮವನ್ನು ಅನುಸರಿಸುವ ಬಾನು ಮುಷ್ತಾಕ್ ಅವರು ಮೂರ್ತಿ ಪೂಜೆ, ಹಿಂದೂ ದೇವತೆಗಳನ್ನು ನಂಬುವುದಿಲ್ಲ. ನನಗೆ ನಾಡದೇವತೆ ಚಾಮುಂಡಿ ಮೇಲೆ ನಂಬಿಕೆ ಇದೆ, ಹಿಂದೂ ಧರ್ಮದ ಮೇಲೆ ನಂಬಿಕೆ ಇದೆ, ಈ ಆಚಾರ ವಿಚಾರಕ್ಕೆ ಬದ್ಧನಾಗಿದ್ದೇನೆ ಎಂದು ಬಾನು ಮುಷ್ತಾಕ್ ಹೇಳಿಕೆ ಕೊಡಬೇಕು. ಇಲ್ಲವಾದರೆ ರಾಜ್ಯ ಸರಕಾರದ ದಸರಾ ಉದ್ಘಾಟನೆ ಕುರಿತ ಆಹ್ವಾನವನ್ನು ಅವರು ತಿರಸ್ಕಾರ ಮಾಡಿದರೆ ಸೂಕ್ತ ಎಂದು ವಿಶ್ವನಾಥ್ ತಿಳಿಸಿದರು.

ಕನ್ನಡದ ಕವಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಈ ಹಿಂದೆ ದಸರಾ ಉದ್ಘಾಟಿಸಿದ್ದರು. ಅವರ ಕುರಿತಂತೆ ಗೌರವವಿದ್ದು, ಆಗ ಅದನ್ನು ವಿವಾದ ಮಾಡಿರಲಿಲ್ಲ. ಬಾನು ಮುಷ್ತಾಕ್ ಎಡಪಂಥೀಯ ಮಹಿಳೆ ಎಂದು ಮುಖ್ಯಮಂತ್ರಿಗಳೆ ಹೇಳಿದ್ದು, ಪತ್ರಿಕೆಗಳಲ್ಲಿ ಬಂದಿದೆ. ಆದುದರಿಂದ, ಅವರಿಗೆ ಆಹ್ವಾನ ಕೊಟ್ಟಿದ್ದನ್ನು ವಿರೋಧಿಸಲಿದ್ದೇವೆ ಎಂದು ಅವರು ತಿಳಿಸಿದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X