Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ...

ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Oct 2025 4:59 PM IST
share
ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ : ವಿಜಯೇಂದ್ರ
"ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಾಣುತ್ತಿದೆ"

ಬೆಂಗಳೂರು : ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ಚಟುವಟಿಕೆ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಚಟುವಟಿಕೆ ನಿಷೇಧಕ್ಕೆ ಸಂಬಂಧಿಸಿದ ಪ್ರಿಯಾಂಕ್ ಖರ್ಗೆಯವರ ಪತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ತಮ್ಮ ಪ್ರಚಾರಕ್ಕಾಗಿ ಚಟದಿಂದ ಮಾತನಾಡುವವರು ಇಂಥ ಹೇಳಿಕೆ ಕೊಡಲು ಸಾಧ್ಯ ಎಂದು ನುಡಿದರು.

ಹಿಂದೆ ಎರಡು ಮೂರು ಬಾರಿ ಇದೇ ರೀತಿ ಆರೆಸ್ಸೆಸ್ ಅನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿತ್ತು. ಅದೇ ಕಾಂಗ್ರೆಸ್ ಪಕ್ಷವು ನಿಷೇಧವನ್ನು ಹಿಂದಕ್ಕೆ ಪಡೆದ ಉದಾಹರಣೆ ದೇಶದ ಮುಂದೆ ಇದೆ. ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದರು.

ಭಾರತ- ಚೀನಾ ಯುದ್ಧದ ಸಂದರ್ಭದಲ್ಲಿ ಆರೆಸ್ಸೆಸ್ ಚಟುವಟಿಕೆಯನ್ನು ಗಮನಿಸಿ, ಶ್ಲಾಘಿಸಿ ಅಂದಿನ ರಿಪಬ್ಲಿಕ್ ಡೇ ಪರೇಡ್‍ನಲ್ಲಿ ಆರೆಸ್ಸೆಸ್‍ಗೆ ಇದೇ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿತ್ತು ಎಂದು ಪ್ರಿಯಾಂಕ್ ಖರ್ಗೆಯವರಿಗೆ ನೆನಪಿಸಲು ಬಯಸುವುದಾಗಿ ಹೇಳಿದರು.

ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಾಣುತ್ತಿದೆ. ಗಾಂಧಿ ಕುಟುಂಬವನ್ನು ಓಲೈಸುವ ನಿಟ್ಟಿನಲ್ಲಿ ಈ ರೀತಿ ಪತ್ರ ಬರೆದಂತೆ ಕಾಣುತ್ತಿದೆ ಎಂದು ವಿಶ್ಲೇಷಿಸಿದರು.

ಆರೆಸ್ಸೆಸ್ 100 ವರ್ಷ ಪೂರೈಸಿದ ಈ ಶುಭ ಘಳಿಗೆಯಲ್ಲಿ ದೇಶಾದ್ಯಂತ ಚಟುವಟಿಕೆ, ಪಥ ಸಂಚಲನ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆಯವರು ಪತ್ರದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೆಲ್ಲದಕ್ಕೂ ಕಾಲ ಉತ್ತರ ಕೊಡಲಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಕಲಬುರಗಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ. ಕಲ್ಯಾಣ ಕರ್ನಾಟಕದಲ್ಲಿ 30-35 ಸಾವಿರ ಶಿಕ್ಷಕರ ನೇಮಕಾತಿ ಆಗಿಲ್ಲವೆಂದು ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರು ಬಹಿರಂಗವಾಗಿ ಹೇಳಿದ್ದಾರೆ. ಅದರ ಬಗ್ಗೆ ಚಿಂತಿಸಬೇಕು ಎಂದು ಒತ್ತಾಯಿಸಿದರು.

‘ಆರೆಸ್ಸೆಸ್ ನಿಷೇಧ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದರೂ ಇಂದಿರಾ ಗಾಂಧಿ ಅವರ ಕೈಯಲ್ಲೇ ಆಗಲಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಅವರೇ ಆರೆಸ್ಸೆಸ್. ದೇಶದ ಬಹುತೇಕ ರಾಜ್ಯಪಾಲರು ಆರೆಸ್ಸೆಸ್. ಇಡೀ ದೇಶವೇ ಆರೆಸ್ಸೆಸ್ ಆಗಿದೆ. ಕಾಂಗ್ರೆಸ್ ಇಂದು ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ರಾಹುಲ್ ಗಾಂಧಿ ಆರೆಸ್ಸೆಸ್ ವಿರುದ್ಧ ಮಾತನಾಡುತ್ತಿದ್ದಾರೆ. ಇವರಿಗೆ ಇತಿಹಾಸ ಗೊತ್ತಿಲ್ಲ, ಇವರಿಗೆ ಆರೆಸ್ಸೆಸ್ ಬಗ್ಗೆ ಮಾತನಾಡುವ ಅರ್ಹತೆಯೇ ಇಲ್ಲ. ಆರೆಸ್ಸೆಸ್‍ನದ್ದು ದೇಶಪ್ರೇಮ, ಕಾಂಗ್ರೆಸ್‍ನದ್ದು ಓಟ್ ಪ್ರೇಮ’

-ಆರ್.ಅಶೋಕ್, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X