Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈ ಸರಕಾರ ಎಷ್ಟು ದಿನ ಇರಲಿದೆ ಎಂಬ...

ಈ ಸರಕಾರ ಎಷ್ಟು ದಿನ ಇರಲಿದೆ ಎಂಬ ಪ್ರಶ್ನೆ ಇದೆ: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Jun 2026 8:49 PM IST
share
ಈ ಸರಕಾರ ಎಷ್ಟು ದಿನ ಇರಲಿದೆ ಎಂಬ ಪ್ರಶ್ನೆ ಇದೆ: ವಿಜಯೇಂದ್ರ

ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹನಿಮೂನ್ ಅವಧಿ ಇಲ್ಲ ಎಂಬುದೂ ಸತ್ಯ. ಯಾರು ಎಷ್ಟೇ ಬಲಶಾಲಿಯಾದರೂ ನಾವು ಪ್ರತಿಪಕ್ಷವಾಗಿ ಈ ಸರಕಾರದ ವೈಫಲ್ಯಗಳನ್ನು ಜನರ ಮುಂದೆ ಬಿಚ್ಚಿಡುವ ಕೆಲಸವನ್ನು ಇನ್ನೂ ಹೆಚ್ಚು ಸಮರ್ಥವಾಗಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸವಾಲನ್ನು ಮೆಟ್ಟಿ ನಿಲುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ. ಈ ಸರಕಾರ ಎಷ್ಟು ದಿನ ಇರಲಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಮುಂದೆ ಯಾವಾಗಲೇ ವಿಧಾನಸಭೆ ಚುನಾವಣೆ ನಡೆದರೂ ರಾಜ್ಯದಲ್ಲಿ ನಮ್ಮ ಸರಕಾರ ತರುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗುತ್ತೇವೆ ಎಂದು ತಿಳಿಸಿದರು.

ಎಲ್ಲರನ್ನೂ ಸಂಭಾಳಿಸಿಕೊಂಡು ಸರಿದೂಗಿಸಿಕೊಂಡು ಹೋಗುವ ಸವಾಲಿನಲ್ಲೇ ಡಿ.ಕೆ.ಶಿವಕುಮಾರ್ ಅವರು ಎರಡು ವರ್ಷಗಳನ್ನು ಕಳೆಯುವ ಕೆಲಸ ಆಗಲಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ತೆಗೆದುಕೊಂಡಿದ್ದು, ತಮ್ಮ ಜೀವನದ ಆಶೆಯನ್ನು ಪೂರೈಸಿಕೊಂಡಿದ್ದಾರೆ. ಅವರ ಸಂಪುಟದ ಸದಸ್ಯರ ಪಟ್ಟಿಯನ್ನು ನೋಡಿದಾಗ ಅದು ಡಿ.ಕೆ.ಶಿವಕುಮಾರ್ ಸಂಪುಟವಲ್ಲ, ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂತಹವರಿಗೂ ಗೊತ್ತಾಗುತ್ತದೆ ಎಂದು ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಸಂಘಟನೆ ಬಲಪಡಿಸುವೆ. ಮುಂದೆ ಬಿಜೆಪಿ ಸರಕಾರವನ್ನು ತರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತೇನೆ. ರಾಜ್ಯಸಭೆಯಲ್ಲಿ ನಮಗಿರುವುದು ಒಂದೇ ಸ್ಥಾನ, ನಮ್ಮ ರಾಜ್ಯದ ದೃಷ್ಟಿಯಿಂದ ರಾಜ್ಯಸಭೆಗೆ ಯಾರನ್ನು ಕಳುಹಿಸಿದರೆ ಲಾಭ ಆಗುತ್ತದೆ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಅವರು ಹೇಳಿದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X