Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್‍ಸಿ ಹಗರಣ, ಬಿಡದಿ ಟೌನ್‍ಶಿಪ್...

ಕೆಪಿಎಸ್‍ಸಿ ಹಗರಣ, ಬಿಡದಿ ಟೌನ್‍ಶಿಪ್ ಯೋಜನೆ ಕುರಿತು ಸದನದಲ್ಲಿ ಚರ್ಚೆ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ2 Aug 2026 7:11 PM IST
share
ಕೆಪಿಎಸ್‍ಸಿ ಹಗರಣ, ಬಿಡದಿ ಟೌನ್‍ಶಿಪ್ ಯೋಜನೆ ಕುರಿತು ಸದನದಲ್ಲಿ ಚರ್ಚೆ : ವಿಜಯೇಂದ್ರ

ಬೆಂಗಳೂರು : ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್‍ಸಿ)ದಲ್ಲಿ ನಡೆದಿರುವ ಹಗರಣ ಹಾಗೂ ಬಿಡದಿ ಟೌನ್‍ಶಿಪ್ ಯೋಜನೆ ವಿಚಾರವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ರವಿವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಉದ್ಯೋಗ ಪಡೆಯುವ ಕನಸಿನೊಂದಿಗೆ ವರ್ಷಾನುಗಟ್ಟಲೆ ಓದಿ ಶ್ರಮ ಹಾಕಿದ ವಿದ್ಯಾರ್ಥಿಗಳಿಗೆ ಕೆಪಿಎಸ್‍ಸಿಯಿಂದ ದೊಡ್ಡ ಅನ್ಯಾಯವಾಗಿದೆ. ಕೆಪಿಎಸ್‍ಸಿ ನೇಮಕಾತಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬಿಡದಿ ಟೌನ್‍ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ವಿಚಾರದಲ್ಲಿ ಯಾವುದೆ ಗೊಂದಲಗಳು ಇಲ್ಲ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪಾದಯಾತ್ರೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಸದನದಲ್ಲಿ ಬಿಡದಿ ಟೌನ್‍ಶಿಪ್ ವಿಚಾರವಾಗಿ ಧ್ವನಿ ಎತ್ತುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಬರವಿದೆ. ಆದರ ಬಗ್ಗೆ ಗಮನ ಹರಿಸಬೇಕಾದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ. ಸರಿಯಾದ ಪ್ರಮಾಣದಲ್ಲಿ ಮಳೆಯಾಗದೆ ರೈತರಿಗೆ ತೊಂದರೆಯಾಗಿದೆ. ಮುಂಬರುವ ಅಧಿವೇಶನದಲ್ಲಿ ನಾಡಿನ ರೈತರ ಒಳಿತಿಗಾಗಿ ಬಿಜೆಪಿ ಹೋರಾಡಲಿದೆ ಎಂಧು ಅವರು ಹೇಳಿದರು.

ಸದನದ ಕಲಾಪವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು, ರೈತರ ಧ್ವನಿಯಾಗಿ ಯಾವ ವಿಚಾರಗಳನ್ನು ಮಂಡನೆ ಮಾಡಬೇಕು ಎಂಬ ವಿಷಯಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ರಾಜ್ಯದ ಜನತೆ ಪರವಾಗಿ ಹೋರಾಡಲಿದೆ ಎಂದು ವಿಜಯೇಂದ್ರ ತಿಳಿಸಿದರು.

ವಿಧಾನಪರಿಷತ್ ಚುನಾವಣೆ: ವಿಧಾನಪರಿಷತ್ ಚುನಾವಣೆ ಸಂಬಂಧವೂ ಮಾತುಕತೆ ನಡೆಸಲಾಯಿತು. ಮುಂದಿನ ಅಕ್ಟೋಬರ್ ನಲ್ಲಿ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ. ಇನ್ನು ಒಂದು ಕ್ಷೇತ್ರಕ್ಕೆ ಜೆಡಿಎಸ್ ಜೊತೆ ಸಮಾಲೋಚನೆ ಮಾಡಿ ಘೋಷಣೆ ಮಾಡಲಾಗುವುದು. ಯಾರನ್ನು ಕಣಕ್ಕಿಳಿಸಬೇಕು ಎಂದು ತೀರ್ಮಾನ ಮಾಡಲಾಗುವುದು ಎಂದು ಅವರು ಹೇಳಿದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X