Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರ್ಥಿಕ ಇಲಾಖೆ ಪತ್ರವೇ ಸರಕಾರದ...

ಆರ್ಥಿಕ ಇಲಾಖೆ ಪತ್ರವೇ ಸರಕಾರದ ದಿವಾಳಿತನದ ಕನ್ನಡಿ; ಜನರ ಕಣ್ಣಿಗೆ ಮಣ್ಣೆರಚುವುದನ್ನು ಮುಖ್ಯಮಂತ್ರಿ ನಿಲ್ಲಿಸಲಿ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ24 Sept 2026 3:22 PM IST
share
ಆರ್ಥಿಕ ಇಲಾಖೆ ಪತ್ರವೇ ಸರಕಾರದ ದಿವಾಳಿತನದ ಕನ್ನಡಿ; ಜನರ ಕಣ್ಣಿಗೆ ಮಣ್ಣೆರಚುವುದನ್ನು ಮುಖ್ಯಮಂತ್ರಿ ನಿಲ್ಲಿಸಲಿ : ವಿಜಯೇಂದ್ರ

ಬೆಂಗಳೂರು : ರಾಜ್ಯದ ಆರ್ಥಿಕ ಪರಿಸ್ಥಿತಿ ಅತ್ಯಂತ ಗಂಭೀರವಾಗಿರುವ ಬಗ್ಗೆ ಆರ್ಥಿಕ ಇಲಾಖೆಯೇ ಪತ್ರದ ಮೂಲಕ ಎಚ್ಚರಿಕೆ ನೀಡಿದೆ. ಇದು ಕಾಟಾಚಾರಕ್ಕೆ ಬರೆದಿರುವ ಪತ್ರವಲ್ಲ. ಸರಕಾರದ ಹಣಕಾಸಿನ ವಾಸ್ತವ ಸ್ಥಿತಿಯನ್ನು ಪ್ರತಿಬಿಂಬಿಸುವ ಅತ್ಯಂತ ಗಂಭೀರ ದಾಖಲೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತ್ರ ರಾಜ್ಯದ ಜನರ ಕಿವಿಗೆ ಹೂವು ಇಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮಾತುಗಳನ್ನು ಕೇಳಿದರೆ ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆಯೇ ಇಲ್ಲ ಎನ್ನುವಂತೆ ಭಾಸವಾಗುತ್ತದೆ. ಇದು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಡಿಕಾರಿದ್ದಾರೆ

ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂತಹ ದರಿದ್ರ ಆರ್ಥಿಕ ಪರಿಸ್ಥಿತಿಯನ್ನು ನಮ್ಮ ರಾಜ್ಯ ಹಿಂದೆಂದೂ ಕಂಡಿರಲಿಲ್ಲ. ಸರಕಾರಿ ನೌಕರರಿಗೆ ಸಂಬಳ ನೀಡಲು ಸರಕಾರ ಪರದಾಡುತ್ತಿದೆ, ಬಡವರು ಮತ್ತು ವಿಕಲಚೇತನರಿಗೆ ನೀಡಬೇಕಾದ ಪಿಂಚಣಿಯನ್ನೂ ಸಮರ್ಪಕವಾಗಿ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಿಧ ಇಲಾಖೆಗಳ ಬಾಕಿ ಹಣ, ಯೋಜನೆಗಳ ಬಾಕಿ ಪಾವತಿ ಹಾಗೂ ಸರಕಾರದ ಬದ್ಧತೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದು ಆಡಳಿತದ ವೈಫಲ್ಯ ಮಾತ್ರವಲ್ಲ, ಸರಕಾರದ ಹಣಕಾಸು ನಿರ್ವಹಣೆ ಎತ್ತ ಸಾಗುತ್ತಿದೆ ಎಂಬುದಕ್ಕೆ ಗಂಭೀರ ಎಚ್ಚರಿಕೆಯಾಗಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ :

ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಹಣಕಾಸು ನಿರ್ವಹಣೆಯ ಪರಿಣಾಮವಾಗಿ ಅಭಿವೃದ್ಧಿ ಯೋಜನೆಗಳಿಗೆ, ರೈತರಿಗೆ ಹಾಗೂ ಇತರ ಅಗತ್ಯ ಕ್ಷೇತ್ರಗಳಿಗೆ ಹಣದ ಕೊರತೆ ಎದುರಾಗುತ್ತಿದೆ ಎಂಬ ಆರೋಪಗಳು ನಿರಂತರವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಆಡಳಿತವಿರುವ ಇತರ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳಿಂದ ಹಣಕಾಸಿನ ಒತ್ತಡ ಉಂಟಾಗಿರುವ ಬಗ್ಗೆ ಅಲ್ಲಿನ ಮುಖ್ಯಮಂತ್ರಿಗಳೇ ಮಾತನಾಡುತ್ತಿದ್ದಾರೆ ಎಂದರು.

ಹಿಮಾಚಲ ಪ್ರದೇಶದಲ್ಲಿ ಹಣಕಾಸಿನ ಒತ್ತಡದ ಹಿನ್ನೆಲೆಯಲ್ಲಿ ದೇವಾಲಯಗಳ ಹುಂಡಿ ಹಣದ ಬಳಕೆಯ ವಿಚಾರವೂ ಚರ್ಚೆಗೆ ಬಂದಿದೆ. ಕರ್ನಾಟಕದಲ್ಲೂ ಪರಿಸ್ಥಿತಿ ಬೇರೆಯಾಗಿಲ್ಲ. ರಾಜ್ಯದ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೇ ಸರಕಾರಕ್ಕೆ ಪತ್ರ ಬರೆದು ಶಕ್ತಿ ಯೋಜನೆಯಡಿ ಸರಕಾರದಿಂದ ಬರಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಕೇಳಿದ್ದಾರೆ ಎಂಬುದು ಸರಕಾರದ ಹಣಕಾಸು ನಿರ್ವಹಣೆಯ ವಾಸ್ತವ ಸ್ಥಿತಿಯನ್ನು ತೋರಿಸುತ್ತದೆ ಎಂದರು.

ಕನಕಪುರಕ್ಕೆ ಏರ್‌ಪೋರ್ಟ್, ಟನಲ್‌ ರಸ್ತೆಗೆ ಇರುವ ಉತ್ಸಾಹ ರೈತರಿಗೂ ಇರಲಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕನಕಪುರದಲ್ಲಿ ಏರ್‌ಪೋರ್ಟ್ ಮಾಡುವ ಉತ್ಸಾಹವಿದೆ. ಟನಲ್‌ ರಸ್ತೆ ಯೋಜನೆಗಳ ಬಗ್ಗೆ ತೋರಿಸುವ ಆಸಕ್ತಿಯಿದೆ. ಆದರೆ ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಅವರ ನೆರವಿಗೆ ಧಾವಿಸುವ ಉತ್ಸಾಹ ಮಾತ್ರ ಏಕೆ ಕಾಣಿಸುತ್ತಿಲ್ಲ? ಎಂದು ಪ್ರಶ್ನಿಸಿದರು.

ಈ ಸದನ ಕರೆದಾಗಲೇ ಸರಕಾರದ ಹಣೆಬರಹ ಗೊತ್ತಾಯಿತು

ವಿಶೇಷ ಅಧಿವೇಶನ ಕರೆಯುವ ಪರಿಸ್ಥಿತಿ ಬಂದಾಗಲೇ ಸರಕಾರದ ಆಡಳಿತದ ಸ್ಥಿತಿ ಏನೆಂಬುದು ಜನರಿಗೆ ಅರ್ಥವಾಯಿತು. ಬರದ ಸಂಕಷ್ಟ, ರೈತರ ಆತ್ಮಹತ್ಯೆ, ಆರ್ಥಿಕ ಅಸಮರ್ಥತೆ, ಯೋಜನೆಗಳ ಬಾಕಿ ಹಣ—ಎಲ್ಲವನ್ನೂ ಎದುರಿಸುವ ಬದಲು ಸರಕಾರ ರಾಜಕೀಯ ಹೇಳಿಕೆಗಳಲ್ಲೇ ಕಾಲ ಕಳೆಯುತ್ತಿದೆ. ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರಕೃತಿ ವಿಕೋಪ ಎದುರಾದ ಸಂದರ್ಭದಲ್ಲಿ ಕೇಂದ್ರದ ನೆರವಿಗಾಗಿ ಕಾಯದೆ ರಾಜ್ಯ ಸರಕಾರದಿಂದಲೇ ತಕ್ಷಣ ಪರಿಹಾರ ಘೋಷಿಸಿ ಜನರ ನೆರವಿಗೆ ಧಾವಿಸಿದ್ದರು. ಪಕ್ಕದ ಮಹಾರಾಷ್ಟ್ರದಲ್ಲೂ ರಾಜ್ಯ ಸರಕಾರ ರೈತರ ನೆರವಿಗೆ ನೇರವಾಗಿ ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕ ಸರಕಾರವೂ ಇದೇ ರೀತಿಯ ತುರ್ತು ಸ್ಪಂದನೆ ತೋರಿಸಬೇಕು ಎಂದು ಆಗ್ರಹಿಸಿದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X