Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ...

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಜಯ | 2028ರ ವಿಧಾನಸಭಾ ಚುನಾವಣೆಗೆ ನೀಡಿರುವ ಸ್ಪಷ್ಟ ದಿಕ್ಸೂಚಿ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ28 Oct 2026 3:04 PM IST
share
ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಜಯ | 2028ರ ವಿಧಾನಸಭಾ ಚುನಾವಣೆಗೆ ನೀಡಿರುವ ಸ್ಪಷ್ಟ ದಿಕ್ಸೂಚಿ : ವಿಜಯೇಂದ್ರ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಎನ್.ಡಿ.ಎ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಿರುವುದು ಕರ್ನಾಟಕದಲ್ಲಿ ನಡೆಯಲಿರುವ 2028ರ ವಿಧಾನಸಭಾ ಚುನಾವಣೆಗೆ ನೀಡಿರುವ ಸ್ಪಷ್ಟ ದಿಕ್ಸೂಚಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಎನ್.ಡಿ.ಎ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಲುಷಿತಗೊಳಿಸಲು ಯತ್ನಿಸುತ್ತಿರುವ ಕ್ಷುದ್ರ ರಾಜಕೀಯ ವ್ಯವಸ್ಥೆಗೆ ತಕ್ಕ ಉತ್ತರ ನೀಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಬೆಂಬಲಿಸುವ ಮೂಲಕ, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಹಾಗೂ ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರ್ಕಾರವನ್ನು ಧಿಕ್ಕರಿಸಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಈ ಚುನಾವಣಾ ಫಲಿತಾಂಶ ರಾಷ್ಟ್ರದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಪ್ಪುಮಸಿ ಬಳಿದು, ದಾಳಿ ನಡೆಸಲು ಹುನ್ನಾರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಜನತೆ ನೀಡಿರುವ ತೀರ್ಪಾಗಿದೆ. ಜೊತೆಗೆ, ಕರ್ನಾಟಕದಲ್ಲಿ ನಡೆಯಲಿರುವ 2028ರ ಚುನಾವಣೆಗೆ ನೀಡಿರುವ ಸ್ಪಷ್ಟ ದಿಕ್ಸೂಚಿಯಾಗಿದೆ. ಮತ ಕಳವು, ಎಸ್‍ಐಆರ್ ವಿರೋಧದ ಹೆಸರಿನಲ್ಲಿ ಚುನಾವಣಾ ವ್ಯವಸ್ಥೆಯ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ಸಿಗರಿಗೆ ನೀಡಿದ ದಿಟ್ಟ ಉತ್ತರವೂ ಆಗಿದೆ ಎಂದು ತಿಳಿಸಿದ್ದಾರೆ.

ಇವಿಎಂ ಅನುಮಾನಿಸುತ್ತಿದ್ದ, ಬ್ಯಾಲೆಟ್ ಮತದಾನವನ್ನು ಪ್ರತಿಪಾದಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಪ್ರತಿಕ್ರಿಯಿಸಿರುವ ಪರಿ ‘ನೀವು ಯಾವ ಮಾರ್ಗದಲ್ಲಿಯೇ ಬಂದರೂ ಇದೇ ನಮ್ಮ ಉತ್ತರ’…ಎನ್ನುವ ರೀತಿಯಲ್ಲಿದೆ. ಇನ್ನಾದರೂ ರಾಹುಲ್ ಗಾಂಧಿಯವರಾದಿಯಾಗಿ ಇಂಡಿ ಒಕ್ಕೂಟದ ಮುಖಂಡರೆಲ್ಲರೂ ನೈಜ ಪ್ರಜಾಪ್ರಭುತ್ವ ವ್ಯವಸ್ಥೆ, ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ಒಪ್ಪಿಕೊಳ್ಳಲಿ. ಹಾಗೂ ಭಾರತದ ಸಾಂವಿಧಾನಿಕ ವ್ಯವಸ್ಥೆಯನ್ನು ಗೌರವಿಸಲಿ. ಇಲ್ಲದಿದ್ದರೆ ಭವಿಷ್ಯತ್ತಿನಲ್ಲಿ ದೇಶದ ಜನತೆ ನಿಮಗೆ ಮತಪತ್ರದ ಮೂಲಕವೂ ದಿಟ್ಟ ಉತ್ತರ ನೀಡಲಿದ್ದಾರೆ, ಇವಿಎಂ ಯಂತ್ರದ ಮೂಲಕವೂ ನೇರ ಉತ್ತರ ನೀಡಿ ವಾಸ್ತವ ಫಲಿತಾಂಶವನ್ನು ಪ್ರಮಾಣೀಕರಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಪಕ್ಷಗಳ ಎನ್.ಡಿ.ಎ ಅಭ್ಯರ್ಥಿಗಳನ್ನು ಗೆಲ್ಲಿಸಿದ ಪದವೀಧರರು ಮತ್ತು ಶಿಕ್ಷಕ ಮತದಾರರಿಗೆ ಕೃತಜ್ಞತಾಪೂರ್ವಕ ವಂದನೆಗಳು ಎಂದು ತಿಳಿಸಿದ್ದಾರೆ. ವಿಜಯಶಾಲಿಗಳಾದ ಕೆ.ಎಂ.ಸುರೇಶ್, ಎಸ್.ವಿ.ಸಂಕನೂರು, ಶಶಿಲ್ ಜಿ. ನಮೋಶಿ ಮತ್ತು ಎ.ಪಿ.ರಂಗನಾಥ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಚುನಾವಣೆಯ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳಿಗೆ ಬಿಜೆಪಿ-ಕರ್ನಾಟಕ ಹೃದಯತುಂಬಿ ವಂದಿಸಿ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X