Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್‌ಸಿ ವಿರುದ್ಧ ವಿಜಯೇಂದ್ರ...

ಕೆಪಿಎಸ್‌ಸಿ ವಿರುದ್ಧ ವಿಜಯೇಂದ್ರ ವಾಗ್ದಾಳಿ: 56,432 ಹುದ್ದೆಗಳ ಭರ್ತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 May 2026 2:29 PM IST
share
ಕೆಪಿಎಸ್‌ಸಿ ವಿರುದ್ಧ ವಿಜಯೇಂದ್ರ ವಾಗ್ದಾಳಿ: 56,432 ಹುದ್ದೆಗಳ ಭರ್ತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಆಗ್ರಹ

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಅರ್ಹ ಪ್ರತಿಭಾವಂತ ನಿರುದ್ಯೋಗಿಗಳ ಪಾಲಿಗೆ ಕಲ್ಪವೃಕ್ಷವಾಗುವ ಬದಲು ಪಾಪಾಸುಕಳ್ಳಿಯಾಗಿ ಲಕ್ಷಾಂತರ ನಿರುದ್ಯೋಗಿಗಳ ಭವ್ಯ ಭವಿಷ್ಯವನ್ನು ಅತಂತ್ರ ಸ್ಥಿತಿಗೆ ಸಿಲುಕಿಸಿದ ಕರಾಳ ಇತಿಹಾಸವನ್ನು ಅಂಟಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಿರುದ್ಯೋಗಿ ಯುವಜನರ ಬೃಹತ್ ಪ್ರತಿಭಟನೆಗೆ ಮಣಿದು 56,432 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಸರ್ಕಾರ ಪ್ರಕಟಿಸಿದೆ. ಆದರೆ ಈ ಸಂಬಂಧ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಸರ್ಕಾರಿ ಯಂತ್ರವನ್ನು ಸಮರ್ಥವಾಗಿ ನಿಭಾಯಿಸಲು ಅರ್ಹ ಅಧಿಕಾರಿಗಳನ್ನು ನೇಮಿಸುವ ಸಂವಿಧಾನಿಕ ಹೊಣೆ ಹೊತ್ತಿರುವ ಲೋಕಸೇವಾ ಆಯೋಗ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರಲ್ಲಿ ವಿಫಲವಾಗಿ ಬ್ರಹ್ಮಾಂಡ ಭ್ರಷ್ಟಾಚಾರ, ಅಕ್ರಮ ಹಾಗೂ ದೋಷಪೂರಿತ ಪ್ರಕ್ರಿಯೆಗಳಿಂದ ಕುಖ್ಯಾತಿ ಪಡೆದಿದೆ ಎಂದು ಟೀಕಿಸಿದ್ದಾರೆ.

ಆಯೋಗದ ಈ ದುರವಸ್ಥೆಗೆ ಅಂಕುಶ ಹಾಕಲು ಆಯೋಗದ ವಿರುದ್ಧದ ನ್ಯಾಯಾಲಯದ ಅನೇಕ ತೀರ್ಪುಗಳು ಭ್ರಷ್ಟ ವ್ಯವಸ್ಥೆಯನ್ನು ಬಯಲು ಮಾಡಿವೆ. ಕೆಲ ತಪ್ಪಿತಸ್ಥರ ಮುಖವಾಡಗಳು ಕೂಡ ಕಳಚಿ ಬಿದ್ದಿವೆ. ಇಷ್ಟಾಗಿಯೂ ಆಯೋಗದ ವ್ಯವಸ್ಥೆಗೆ ಕಾಯಕಲ್ಪ ನೀಡುವ ಪ್ರಯತ್ನ ಈವರೆಗೂ ಸಾಧ್ಯವಾಗಿಲ್ಲ. ಸದ್ಯ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅಭ್ಯರ್ಥಿಗಳ ಆಯ್ಕೆಗೆ ಸುಧಾರಣೆಗಳನ್ನು ತರುವುದಾಗಿ ಆಯೋಗದ ಮೂಲಗಳು ತಿಳಿಸಿವೆ. ಆದರೆ ಇದನ್ನು ನಂಬುವ ಮನಸ್ಥಿತಿಯನ್ನು ಉದ್ಯೋಗಾಕಾಂಕ್ಷಿಗಳು ಕಳೆದುಕೊಂಡಿದ್ದಾರೆ ಎಂದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಿಟ್ಟಿನಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ ಇನ್ನಾದರೂ ಪಾರದರ್ಶಕತೆ ಕಾಯ್ದುಕೊಂಡು ಕಟ್ಟುನಿಟ್ಟಿನ ನಿಯಮಗಳನ್ನು ಅಳವಡಿಸಿಕೊಂಡು ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸುಭದ್ರ ವ್ಯವಸ್ಥೆ ರೂಪಿಸಿಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಆಯೋಗದ ಅಸ್ತಿತ್ವವನ್ನೇ ಪ್ರಶ್ನಿಸುವ ಪರಿಸ್ಥಿತಿ ಉದ್ಭವಿಸಲಿದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿ 56,432 ಹುದ್ದೆಗಳ ಭರ್ತಿಗೆ ಮೀನಾಮೇಷ ಎಣಿಸದೇ ಅಧಿಸೂಚನೆ ಹೊರಡಿಸಿ ಅತೀ ಶೀಘ್ರದಲ್ಲಿ ನ್ಯಾಯೋಚಿತವಾಗಿ ಅಭ್ಯರ್ಥಿಗಳ ಆಯ್ಕೆ ಆಗುವಂತೆ ಕಾಳಜಿ ಪ್ರದರ್ಶಿಸಬೇಕು. ಇಲ್ಲವಾದರೆ ಈಗಾಗಲೇ ಹತಾಶೆಯ ಅಂಚಿನಲ್ಲಿರುವ ಲಕ್ಷಾಂತರ ನಿರುದ್ಯೋಗಿಗಳ ಆಕ್ರೋಶ ಆಸ್ಪೋಟವಾಗಲಿದೆ ಎಂಬ ಎಚ್ಚರವಿರಲಿ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಅರ್ಹ ಪ್ರತಿಭಾವಂತ ನಿರುದ್ಯೋಗಿಗಳ ಪಾಲಿಗೆ ಕಲ್ಪವೃಕ್ಷವಾಗುವ ಬದಲು ಪಾಪಾಸುಕಳ್ಳಿಯಾಗಿ ಲಕ್ಷಾಂತರ ನಿರುದ್ಯೋಗಿಗಳ ಭವ್ಯ ಭವಿಷ್ಯವನ್ನು ಅತಂತ್ರ ಸ್ಥಿತಿಗೆ ಸಿಲುಕಿಸಿದ ಕರಾಳ ಇತಿಹಾಸವನ್ನು ಅಂಟಿಸಿಕೊಂಡಿದೆ.

ನಿರುದ್ಯೋಗಿ ಯುವಜನರ ಬೃಹತ್‌ ಪ್ರತಿಭಟನೆಗೆ ಮಣಿದು…

— Vijayendra Yediyurappa (@BYVijayendra) May 11, 2026

share
ವಾರ್ತಾಭಾರತಿ
ವಾರ್ತಾಭಾರತಿ
Next Story
X